‘ಹನುಮಾನ್’ ಹೀರೋ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಅನೌನ್ಸ್

Public TV
1 Min Read
teja sajja

‘ಹನುಮಾನ್’ (Hanuman) ಸಿನಿಮಾ ಮೂಲಕ ಸೂಪರ್ ಸಕ್ಸಸ್ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2 (Karthikeya 2), ಧಮಾಕ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಇಂದು (ಏ.18) ಅನಾವರಣಗೊಂಡಿದೆ.

teja sajja 1

‘ಹನುಮಾನ್’ನಲ್ಲಿ (Hanuman Film) ಸೂಪರ್ ಹೀರೋ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ. ಇದನ್ನೂ ಓದಿ:ಇಡಿಯಿಂದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಆಸ್ತಿ ಜಪ್ತಿ

 

View this post on Instagram

 

A post shared by Hanu⭐️Man (@tejasajja123)

ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾ ‘ಮಿರಾಯ್’ ಎಂಬ ಟೈಟಲ್ ಇಡಲಾಗಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ.

teja sajja

‘ಮಿರಾಯ್’ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ಅನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಕಾರ್ತಿಕ್ ಗಟ್ಟಮ್ನೇನಿ ಮಿರಾಯ್‌ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

Share This Article