CinemaKarnatakaLatestMain PostSandalwood

ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ

ಡಾ.ರಾಜ್ ಕುಮಾರ್ ಅಭಿನಯದ ‘ದೇವತಾ ಮನುಷ್ಯ’ ಸೇರಿದಂತೆ ಕನ್ನಡದಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿರುವ ಹಿರಿಯ ನಟ ಉದಯ್ ಹುತ್ತಿನಗದ್ದೆ ಇಹಲೋಕ ತ್ಯಜಿಸಿದ್ದಾರೆ. ‘ಆರಂಭ’ ಸಿನಿಮಾದ ಮೂಲಕ 1980ರ ದಶಕದ ಕೊನೆಯಲ್ಲಿ ಇವರು ನಾಯಕ ನಟರಾಗಿಯೂ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆ ಗ್ರಾಮದವರಾದ ಉದಯ್, ಮೈಸೂರು ಹಾಗೂ ಬೆಂಗಳೂರಿನಲ್ಲಿ ಶಿಕ್ಷಣ ಪಡೆದು, ನಂತರ ಡಾ.ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಶ್, ಡಾ. ವಿಷ್ಣುವರ್ಧನ್ ಸೇರಿದಂತೆ ಅನೇಕ ಹಿರಿಯ ಕಲಾವಿದರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಅಲ್ಲದೇ, ಅಭಿನಯ ತರಂಗ ನಟನಾ ಶಾಲೆಯಲ್ಲಿ ತರಬೇತಿ ಪಡೆದು, ರಂಗಕರ್ಮಿ ಕೂಡ ಆಗಿದ್ದರು.

ಅಗ್ನಿಪರ್ವ, ಶುಭ ಮಿಲನ, ಅಮೃತಬಿಂದು, ಉದ್ಭವ, ಜಯಭೇರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗುರುತಿಸಿಕೊಳ್ಳುವಂತಹ ಪಾತ್ರ ಮಾಡಿದ್ದ ಉದಯ್, ಆನಂತರ ಸಿನಿಮಾ ರಂಗದಿಂದ ದೂರವಾಗಿ ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಹೊಂದಿದ್ದರು. ಅದೇ ಉದ್ಯಮದಲ್ಲಿಯೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.  ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

ನಟನೆಯ ಜೊತೆಗೆ ಬೆಂಗಳೂರಿನ ನವರಂಗ ಬಳಿ ಫೋಟೋಗ್ರಫಿ ಸ್ಟುಡಿಯೋ ಕೂಡ ನಡೆಸುತ್ತಿದ್ದ ಅವರು, ಮಲೆನಾಡಿನಿಂದ ಬರುವ ಹುಡುಗರಿಗೆ ಆಶ್ರಯ ತಾಣವೂ ಅದಾಗಿತ್ತು. ಸಿನಿಮಾ ರಂಗದಲ್ಲಿ ಅವರಿಗೆ ನಿರೀಕ್ಷಿತ ಗೆಲುವು ಸಿಗದೇ ಇರುವ ಕಾರಣಕ್ಕಾಗಿ ಕಲರ್ ಲ್ಯಾಬ್ ಮಾಡಿಕೊಂಡು ಈ ಕ್ಷೇತ್ರದಲ್ಲಿ ಅಪಾರ ಹೆಸರು ಮಾಡಿದರು.

Leave a Reply

Your email address will not be published.

Back to top button