ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ UI ಸಿನಿಮಾ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಹೀಗಿರುವಾಗ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ಭೇಟಿ ಕೊಟ್ಟ ಬೆನ್ನಲ್ಲೇ ಈಗ ಉಡುಪಿ ಶ್ರೀ ಕೃಷ್ಣ ಮಠಕ್ಕೆ UI ಟೀಮ್ ಭೇಟಿ ಕೊಟ್ಟಿದೆ.
ಚಿತ್ರತಂಡದ ಜೊತೆ ಶ್ರೀ ಕೃಷ್ಣನ ಸನ್ನಿಧಾನದಲ್ಲಿ ಉಪೇಂದ್ರ (Upendra) ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಠದ ಪುತ್ತಿಗೆ ಸುಗುಣೇಂದ್ರ ತೀರ್ಥರಿಂದ UI ತಂಡಕ್ಕೆ ಶುಭ ಹಾರೈಸಿದ್ದಾರೆ. ಮಠಕ್ಕೆ ಭೇಟಿ ನೀಡಿದ ಬಳಿಕ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್ ಕ್ಯಾಮೆರಾಗೆ ನಟ ಪೋಸ್ ನೀಡಿದ್ದಾರೆ.
ಇನ್ನೂ ಡಿ.20ರಂದು ಸಿನಿಮಾ ರಿಲೀಸ್ ಆಗಿತ್ತು. 2040 ಭವಿಷ್ಯದ ಅಸಲಿ ಕಥೆಯೊಂದಿಗೆ ಯುಐ ಸಿನಿಮಾ ಮೂಲಕ ಉಪೇಂದ್ರ ಅಬ್ಬರಿಸಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.