ನಟ ಉಪೇಂದ್ರ (Upendra) ವಿರುದ್ಧ ಹಲಸೂರು ಠಾಣೆಯಲ್ಲಿ ದಾಖಲಾಗಿದ್ದ ಕೇಸ್ನ್ನ ಸಿ.ಕೆ ಅಚ್ಚುಕಟ್ಟು ಠಾಣೆಗೆ ವರ್ಗಾವಣೆ ಮಾಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಜಾತಿ ನಿಂದನೆ ಆರೋಪ ಹಿನ್ನೆಲೆ ಉಪೇಂದ್ರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿರೋ ಕೇಸ್ ಅನ್ನು ಸಿ.ಕೆ ಅಚ್ಚಕಟ್ಟು ಠಾಣೆಗೆ ವರ್ಗಾಯಿಸಲು ತಯಾರಿ ಮಾಡ್ತಿದ್ದಾರೆ. ಇದನ್ನೂ ಓದಿ:ಹುಟ್ಟೋದು ಸಾಯೋದು ಎರಡೇ ಸತ್ಯ- ಸ್ಪಂದನಾ ಸಾವಿನ ಬಗ್ಗೆ ರಾಘಣ್ಣ ಪ್ರತಿಕ್ರಿಯೆ
Advertisement
ಮೊದಲು ಸಿ.ಕೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಹಲಸೂರು ಗೇಟ್ ಠಾಣೆ ಎಫ್ಐಆರ್ (FIR) ಕೂಡ ಅಲ್ಲಿಗೆ ವರ್ಗಾವಣೆ ಮಾಡಲು ನಿರ್ಧಾರ ಮಾಡಲಾಗಿದೆ. ಸಿ.ಕೆ ಅಚ್ಚುಕಟ್ಟು ಠಾಣೆಯ ಕೇಸ್ ಬಗ್ಗೆ ವಿ.ವಿ.ಪುರಂ ಎಸಿಪಿ ನಾಗರಾಜ್ ತನಿಖೆ ನಡೆಸಲಿದ್ದಾರೆ. ಆ.13ರಂದು ಉಪೇಂದ್ರಗೆ ವಿಚಾರಣೆಗೆ ಹಾಜರಾಗಲು ಎಸಿಪಿ ನಾಗರಾಜ್ ನೋಟಿಸ್ ನೀಡಿದ್ದರು. ಆದರೆ ನಟ ಉಪೇಂದ್ರ ವಿಚಾರಣೆಗೆ ಹಾಜರಾಗಿರಲಿಲ್ಲ. ಬದಲಾಗಿ ಯಾರ ಕಣ್ಣಿಗೂ ಬೀಳದೆ ತಮ್ಮ ವಕೀಲರ ಮೂಲಕ ಹೈಕೋರ್ಟ್ (High Court) ಮೊರೆ ಹೋಗಿದ್ದರು. ಸೋಮವಾರ (ಆಗಸ್ಟ್ 14)ರಂದು ಹೈಕೋರ್ಟ್, ನಟ ಉಪೇಂದ್ರ ಅರ್ಜಿ ಪುರಸ್ಕರಿಸಿ ಎಫ್ಐಆರ್ಗೆ ಮಧ್ಯಂತರ ತಡೆ ನೀಡಿತ್ತು. ಹೀಗಾಗಿ ಹೈಕೋರ್ಟ್ ಆದೇಶ ಪ್ರತಿ ನೋಡಿಕೊಂಡು ಮುಂದುವರೆಸಲು ಪೊಲೀಸರು ನಿರ್ಧಾರ ಮಾಡಿದ್ದಾರೆ.
Advertisement
Advertisement
ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಉಪೇಂದ್ರ ಮೇಲೆ ಆಗಸ್ಟ್ 13ರಂದು ಪ್ರಕರಣ ದಾಖಲಾಗಿತ್ತು. ಸಮುದಾಯವೊಂದನ್ನು ನಿಂದಿಸಿದ ಆರೋಪದಡಿ ಉಪೇಂದ್ರ ವಿರುದ್ಧ ಕಾನೂನು ಹೋರಾಟಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮುಂದಾಗಿದ್ದರು. ಇದನ್ನೂ ಓದಿ:ಲಾಲ್ಬಾಗ್ ಸಿಬ್ಬಂದಿಯನ್ನು ಮನೆಗೆ ಆಹ್ವಾನಿಸಿ ಕ್ಷಮೆ ಕೋರಿದ ರಚಿತಾ ರಾಮ್
Advertisement
ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ, ಮೊದಲಿಗೆ ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ತಮ್ಮದೇ ವಾರಗೆಯ ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತವನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು. ಬಳಿಕ ಮಾತು ಮುಂದುವರೆಸಿ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದರು. ಉಪೇಂದ್ರ ಅವರ ಈ ಮಾತಿಗೆ ಅನೇಕರು ಕಿಡಿಕಾರಿದ್ದರು.