ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ UI ಸಿನಿಮಾ ಡಿ.20ರಂದು ಅದ್ಧೂರಿಯಾಗಿ ರಿಲೀಸ್ ಆಗಿದೆ. ಉಪ್ಪಿ ಎಂಟ್ರಿ ನೋಡಿ ಫ್ಯಾನ್ಸ್ ಅಬ್ಬರ, ಸೆಲೆಬ್ರೇಶನ್ ಎರಡು ಜೋರಾಗಿದೆ. ಸಿನಿಮಾ ರಿಲೀಸ್ ಸಂಭ್ರಮದ ನಡುವೆ ಉಪೇಂದ್ರ ಮತ್ತು ಶಿವಣ್ಣ ಫೋಟೋ ಇಟ್ಟು ವಿಶೇಷ ಪೂಜೆ ಮಾಡಿದ್ದಾರೆ. ಇದನ್ನೂ ಓದಿ:UI ಅಬ್ಬರ: ಉಪ್ಪಿ ನಟನೆ, ನಿರ್ದೇಶನಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಪ್ರೇಕ್ಷಕರು
Advertisement
UI ರಿಲೀಸ್ ಸಮಯದಲ್ಲೇ ಸಂತೋಷ್ ಥಿಯೇಟರ್ ಮುಂದೆ ಅಭಿಮಾನಿ ಒಬ್ಬರು ಶಿವಣ್ಣ (Shivarajkumar) ಸರ್ಜರಿ ಬಳಿಕ ಆರೋಗ್ಯವಾಗಿ ಭಾರತಕ್ಕೆ ಹಿಂದಿರುಗಲಿ ಎಂದು ಪೂಜೆ ಮಾಡಿಸಿದ್ದಾರೆ. ಚಿತ್ರಮಂದಿರದ ಮುಂದೆ ಶಿವಣ್ಣ, ಉಪೇಂದ್ರ ಅವರ ಫೋಟೋಗಳನ್ನಿಟ್ಟು ಹೋಮ ಮಾಡಿದ್ದಾರೆ. ಮೂವರು ಪೂಜಾರಿಗಳು ಹೋಮ ಕುಂಡಕ್ಕೆ ತುಪ್ಪ ಸುರಿದು ಮಂತ್ರ ಪಠಿಸಿದ್ದಾರೆ.
Advertisement
Advertisement
UI ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ತಲೆಗೆ ಉಪೇಂದ್ರ ಹುಳ ಬಿಟ್ಟಿದ್ದಾರೆ. ಚಿತ್ರದ ಕಥೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಳಗ್ಗೆ 6:30ರಿಂದಲೇ ಚಿತ್ರದ ಪ್ರದರ್ಶನ ಶುರುವಾಗಿದೆ. ‘ಯುಐ’ ಚಿತ್ರ ನೋಡಿ ಫ್ಯೂಚರ್ ಫಿಲ್ಮ್, ಮತ್ತೊಮ್ಮೆ ಸಿನಿಮಾ ನೋಡಿದ್ರೆನೇ ಅರ್ಥವಾಗೋದು ಎಂದು ಪ್ರೇಕ್ಷಕರಿಂದ ರೆಸ್ಪಾನ್ಸ್ ಬಂದಿದೆ. ಎಂದಿಗೂ ಕಾಯಕವೇ ಕೈಲಾಸ, ಕೆಲಸ ಮಾಡಿ ಅಂತ ಹೇಳಿದ್ದಾರೆ. ಜೀವನದ ಬಗ್ಗೆ ಫೋಕಸ್ ಮಾಡಿ ಅನ್ನುವ ಸಂದೇಶ ಜನರಿಗೆ ಕೊಟ್ಟಿದ್ದಾರೆ. ಉಪೇಂದ್ರ ನಟನೆ, ನಿರ್ದೇಶನಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.
Advertisement
ಇನ್ನೂ 2040 ಭವಿಷ್ಯದ ಅಸಲಿ ಕಥೆಯೊಂದಿಗೆ ಯುಐ ಸಿನಿಮಾ ಮೂಲಕ ಉಪೇಂದ್ರ ಅಬ್ಬರಿಸಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.