ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದಾರೆ.
ಉಪೇಂದ್ರ ಅವರು ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.
ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ/-ರೂ ಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ. ತಾವುಗಳೂ ಪ್ರವಾಹಕ್ಕೆ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗಬೇಕೆಂದು ಕೇಳಿಕೊಳ್ಳುತ್ತೇನೆ. ???????? #SAVENORTHKARNATAKA #KarnatakaFloods #saveuttarakannada
— Upendra (@nimmaupendra) August 8, 2019
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಕೂಡ ತಮ್ಮ ಟ್ವಿಟ್ಟರಿನಲ್ಲಿ ವಿಡಿಯೋ ಹಾಕಿದ್ದಾರೆ. ಅಲ್ಲದೆ, “ಉತ್ತರ ಕರ್ನಾಟಕದ ಪ್ರವಾಹದ ದೃಶ್ಯವಾಳಿಗಳು ಕಂಡು ಬೇಜಾರು ಹಾಗೂ ಭಯವಾಯಿತು. ನಿಮ್ಮ ಜೊತೆ ನಾವಿದ್ದೀವಿ ನಿಮ್ಮ ಸಹಾಯಕ್ಕೆ ನಾವೆಲ್ಲಾ ಕೈ ಜೋಡಿಸ್ತೀವಿ. ನಮ್ಮ ಚಿತ್ರರಂಗದ ಎಲ್ಲ ಕಲಾವಿದರ ಹಾಗೂ ಅಭಿಮಾನಿಗಳು ಜೊತೆಗೂಡಿ ನಿಮಗೆ ಬೇಕಾದ ಅಗತ್ಯಗಳನ್ನು ಕಳುಹಿಸುವ ಪ್ರಯತ್ನ ಮಾಡಿತ್ತಿದ್ದೀವಿ. ದಯವಿಟ್ಟು ಕುಗ್ಗಬೇಡಿ ಧೈರ್ಯದಿಂದಿರಿ” ಎಂದು ಟ್ವೀಟ್ ಮಾಡಿದ್ದಾರೆ.
ಉತ್ತರ ಕರ್ನಾಟಕದ ಪ್ರವಾಹದ ದೃಶ್ಯವಾಳಿಗಳು ಕಂಡು ಬೇಜಾರು ಹಾಗು ಭಯವಾಯಿತು. ನಿಮ್ಮ ಜೊತೆ ನಾವಿದ್ದೀವಿ ನಿಮ್ಮ ಸಹಾಯಕ್ಕೆ ನಾವೆಲ್ಲಾ ಕೈ ಜೋಡಿಸ್ತೀವಿ. ನಮ್ಮ ಚಿತ್ರರಂಗದ ಎಲ್ಲ ಕಲಾವಿದರ ಹಾಗು ಅಭಿಮಾನಿಗಳು ಜೊತೆಗೂಡಿ ನಮಗೆ ಬೇಕಾದ ಅಗತ್ಯಗಳನ್ನು ಕಳುಹಿಸುವ ಪ್ರಯತ್ನ ಮಾಡಿತ್ತಿದ್ದೀವಿ. ದಯವಿಟ್ಟು ಕುಗ್ಗಬೇಡಿ ಧೈರ್ಯದಿಂದಿರಿ.
ನಿಮ್ಮ ಶಿವು pic.twitter.com/xzvdJYwDEo
— DrShivaRajkumar (@NimmaShivanna) August 8, 2019
ಬಾಲಿವುಡ್ ನಟ ಕಬೀರ್ ಸಿಂಗ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಪ್ರವಾಹದಿಂದ ಸಿಲುಕಿರುವ ಉತ್ತರ ಕರ್ನಾಟಕ ಜನರಿಗೆ ದಯವಿಟ್ಟು ಸಹಾಯ ಮಾಡಿ. ಯಾವುದೇ ರೀತಿಯಲ್ಲಿ ಬೇಕಾದರೂ ಸಹಾಯ ಮಾಡಿ” ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕಬೀರ್ ಅವರ ಟ್ವೀಟ್ಗೆ ಅಭಿಮಾನಿಗಳು ನಾವು ಅವರ ಜೊತೆ ಇದ್ದೇವೆ ಎಂದು ರೀ-ಟ್ವೀಟ್ ಮಾಡುವ ಮೂಲಕ ಸ್ಪಂದಿಸಿದ್ದಾರೆ. ಕಬೀರ್ ಸಿಂಗ್ ಈ ಹಿಂದೆ ಕಿಚ್ಚ ಸುದೀಪ್ ಅವರ ಜೊತೆ `ಹೆಬ್ಬುಲಿ’ ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ್ದರು.
Please help north karnataka people who are stranded in floods with any support u can ????????????????
— Kabir Duhan Singh (@Kabirduhansingh) August 8, 2019
ಸ್ಯಾಂಡಲ್ವುಡ್ ಕಲಾವಿದರಾದ ದರ್ಶನ್, ಸುದೀಪ್, ಜಗ್ಗೇಶ್, ಶ್ರೀಮುರಳಿ, ಚಂದನ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಸೇರಿದಂತೆ ಹಲವರು ಉತ್ತರ ಕರ್ನಾಟಕಕ್ಕೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.