ಬ್ಯಾಂಕ್‌ ಜನಾರ್ಧನ್‌ ಅದ್ಭುತ ಅಭಿನಯದಿಂದ ನನ್ನ ಸಿನಿಪಯಣದಲ್ಲಿ ಯಶಸ್ವಿ ಹೆಜ್ಜೆ ಇಟ್ಟೆ: ಉಪೇಂದ್ರ

Public TV
1 Min Read
bank janardhan upendra

ಹಿರಿಯ ನಟ ಬ್ಯಾಂಕ್ ಜನಾರ್ಧನ್ (Bank Janardhan) ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಇದೀಗ ನಟನ ನಿಧನದ ಕುರಿತು ಉಪೇಂದ್ರ ರಿಯಾಕ್ಟ್ ಮಾಡಿದ್ದಾರೆ. ತಮ್ಮ ಅದ್ಭುತ ಅಭಿನಯದಿಂದ ನನ್ನ ಸಿನಿಪಯಣದಲ್ಲಿ ಯಶಸ್ವಿ ಹೆಜ್ಜೆ ಇಡಲು ಕಾರಣಕರ್ತರಾದವರು ಎಂದು ಬ್ಯಾಂಕ್ ಜನಾರ್ಧನ್‌ರನ್ನು ರಿಯಲ್‌ ಸ್ಟಾರ್ ಉಪೇಂದ್ರ (Upendra) ಸ್ಮರಿಸಿದ್ದಾರೆ. ಇದನ್ನೂ ಓದಿ:ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

Bank Janardhan

‘ತರ್ಲೆ ನನ್ಮಗ’ ಸಿನಿಮಾದಲ್ಲಿ ಬ್ಯಾಂಕ್‌ ಜನಾರ್ಧನ್‌ಗೆ ಉಪೇಂದ್ರ ನಿರ್ದೇಶನ ಮಾಡಿದ್ದರು. ಹೀಗಾಗಿ ಅವರನ್ನು ನಟ ಸ್ಮರಿಸಿ ಪೋಸ್ಟ್‌ ಶೇರ್‌ ಮಾಡಿದ್ದಾರೆ. ‘ತರ್ಲೆ ನನ್ಮಗ, ಶ್ ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯದಿಂದ ನನ್ನ ಸಿನಿ ಪಯಣದಲ್ಲಿ ಯಶಸ್ವಿ ಹೆಜ್ಜೆ ಇಡಲು ಕಾರಣಕರ್ತರಾದ ಸರಳ, ಸ್ನೇಹ ಜೀವಿ, ಅಪರೂಪದ ಕಲಾವಿದ ಬ್ಯಾಂಕ್ ಜನಾರ್ಧನ್. ಬೇರೆ ಪಾತ್ರಕ್ಕೆ ಸಜ್ಜಾಗಿ ಬರಲು ವಿಧಿವಶರಾಗಿದ್ದಾರೆ. ಬೇಗ ಬನ್ನಿ ಸಾರ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಉಪೇಂದ್ರ ಭಾವುಕವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

 

View this post on Instagram

 

A post shared by Upendra Kumar (@nimmaupendra)

ಅಂದಹಾಗೆ, ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.

80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.

Share This Article