ನೂರಾರು ಕಿಲೋ ಮೀಟರ್ ಅಂತರದ ರಾಜ್ಯದಲ್ಲಿರುವ ತಮಿಳು ನಟ ವಿಜಯ್ (Vijay), ಕೇರಳಕ್ಕೆ (Kerala) ಬಾರದೇ ಬರೋಬ್ಬರಿ 14 ವರ್ಷಗಳ ಆಗಿತ್ತು. ತಮಿಳಿಗಿಂತಲೂ ಕೇರಳದಲ್ಲಿ ವಿಜಯ್ ಅವರಿಗೆ ಹೆಚ್ಚು ಅಭಿಮಾನಿಗಳು ಇದ್ದಾರೆ. ವಿಜಯ್ ಸಿನಿಮಾ ರಿಲೀಸ್ ಆದಾಗೆಲ್ಲ ಕೇರಳಾದ್ಯಂತ ವಿಜಯ್ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಆದರೂ, 14 ವರ್ಷಗಳ ಕಾಲ ಅವರು ಕೇರಳಕ್ಕೆ ಕಾಲಿಟ್ಟಿರಲಿಲ್ಲ.
Advertisement
ನಿನ್ನೆಯಷ್ಟೇ ವಿಜಯ್ ಕೇರಳಕ್ಕೆ ಬಂದಿಳಿದಿದ್ದಾರೆ. ಕಾರಣ, ಅವರ ಗ್ರೇಟೆಸ್ಟ್ ಆಫ್ ಆಲ್ ಟೈಮ್ (Greatest of all time) ಸಿನಿಮಾದ ಶೂಟಿಂಗ್ ಅಲ್ಲಿ ನಡೆಯಲಿದೆ. ಜೊತೆಗೆ ರಾಜಕಾರಣದಲ್ಲೂ ವಿಜಯ್ ಕಾಲಿಟ್ಟಿರುವುದರಿಂದ ಕೇರಳಕ್ಕೆ ಬಂದಿರುವುದಕ್ಕೆ ಮಹತ್ವವನ್ನೂ ಕಲ್ಪಿಸಲಾಗುತ್ತಿದೆ. ಸಾಕಷ್ಟು ಬಿಗಿಭದ್ರತೆಯನ್ನೂ ಅವರಿಗೆ ನಿನ್ನ ನೀಡಲಾಗಿತ್ತು.
Advertisement
Advertisement
ಕಾಲಿವುಡ್ನಲ್ಲಿ (Kollywood) ವಿಜಯ್ಗೆ ದೊಡ್ಡ ಮಟ್ಟದಲ್ಲಿ ಫ್ಯಾನ್ ಬೇಸ್ ಇದೆ. ಅವರ ಸಿನಿಮಾಗಾಗಿಯೇ ಕಾದು ಕೂರುವ ಅಭಿಮಾನಿಗಳಿದ್ದಾರೆ. ಈ ಹಿಂದೆ ‘ಲಿಯೋ’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡಿತ್ತು. ಈ ಸಮಯದಲ್ಲೇ ಹೊಸ ಸಿನಿಮಾದತ್ತ ವಿಜಯ್ ಮುಖ ಮಾಡಿದ್ದರು.
Advertisement
ವಿಜಯ್ ನಟನೆಯ ದ ಗ್ರೇಟೆಸ್ಟ್ ಆಫ್ ಆಲ್ ಟೈಮ್ ಚಿತ್ರಕ್ಕೆ ವೆಂಕಟ್ ಪ್ರಭು (Venkat Prabhu) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದಸರಾ ಹಬ್ಬದ (ಅ.24) ಶುಭ ಸಂದರ್ಭದಲ್ಲಿ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತ್ತು. ಚಿತ್ರದ ದೊಡ್ಡ ತಾರಾ ಬಳಗ ಈ ಸಮಾರಂಭದಲ್ಲಿ ಭಾಗಿಯಾಗಿತ್ತು.
ದಳಪತಿ ವಿಜಯ್ ಜೊತೆ ಬಹುಭಾಷಾ ನಟ ಕನ್ನಡಿಗ ಪ್ರಭುದೇವ (Prabhudeva), ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ಜಯರಾಮ್, ಯೋಗಿ ಬಾಬು (Yogi Babu) ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಮುಹೂರ್ತ ಕಾರ್ಯಕ್ರಮದಲ್ಲಿಯೂ ಅವರೆಲ್ಲ ಭಾಗಿಯಾಗಿದ್ದರು.