ರಾಯಚೂರು: ತಮ್ಮ ಮುಂದಿನ ಸಿನಿಮಾ ಯಶಸ್ಸಿಗಾಗಿ ನಟ ವಿನೋದ್ ಪ್ರಭಾಕರ್ (Vinod Prabhakar) ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಉರುಳು ಸೇವೆ ಮಾಡಿ ಹರಕೆ ತೀರಿಸಿದ್ದಾರೆ.
‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಸಿನಿಮಾ ತಂಡದೊಂದಿಗೆ ವಿನೋದ್ ಪ್ರಭಾಕರ್ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಮಂತ್ರಾಲಯ ಹಾಗೂ ರಾಯಚೂರಿನ (Raichur) ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮನೆಗಳ್ಳತನ ಮಾಡಿದ್ದ ಇಬ್ಬರು ಅರೆಸ್ಟ್ – 10 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ
ರಾಯಚೂರಿನ ಗಾಂಧಿ ವೃತ್ತದಲ್ಲಿನ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿನೋದ್ ಪ್ರಭಾಕರ್, ನನಗೆ ನಮ್ಮ ತಂದೆಯವರಿಗೆ ಉತ್ತರ ಕರ್ನಾಟಕದಿಂದ ಒಳ್ಳೆಯ ಅಭಿಮಾನ ಬಳಗ ಇದೆ. ಈ ಕಡೆ ಜನ ನಮಗೆ ತುಂಬಾ ಬೆಂಬಲ ಕೊಡುತ್ತಾರೆ. ಬೆಳಗ್ಗೆ ಮಂತ್ರಾಲಯ ರಾಯರ ಮಠಕ್ಕೆ ಹೋಗಿ ಆಶಿರ್ವಾದ ಪಡೆದಿದ್ದೇವೆ. ಜೂನ್ 6 ಕ್ಕೆ ಮಾದೇವ ಸಿನಿಮಾ ತೆರೆಗೆ ಬರುತ್ತಿದೆ. ಇಡೀ ಚಿತ್ರ ತಂಡ ಪ್ರಚಾರ ನಡೆಸಿದ್ದೇವೆ. ಎಲ್ಲರೂ ಹರಸಿ ಹಾರೈಸಬೇಕು ಎಂದರು. ಇದನ್ನೂ ಓದಿ: ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ: ಈಶ್ವರ್ ಖಂಡ್ರೆ
ರಾಯರ ಮಠದಲ್ಲಿ ಉರುಳು ಸೇವೆ ಮಾಡಬೇಕು ಎಂದು ಮೊದಲೇ ಅಂದುಕೊಂಡಿದ್ದೆ. ಮಠಕ್ಕೆ ಬರಲು ಆಗಿರಲಿಲ್ಲ. ಹಾಗಾಗಿ ಈಗ ಉರುಳು ಸೇವೆ ಮಾಡಿದ್ದೇನೆ. ನಾನು ರಾಯರು ಹಾಗೂ ಬಾಬಾ ಭಕ್ತ. ನಮ್ಮ ಸಿನಿಮಾಗೆ ಗುರು ಬಲ ಸಿಗಲಿ ಎಂದು ಬೇಡಿಕೊಂಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರವನ್ನ ಕ್ಯಾಮೆರಾ ಮುಂದೆಯೇ ಮಾಡಲಾಯ್ತು ಆದ್ದರಿಂದ ಯಾರೂ ಪುರಾವೆ ಕೇಳಲ್ಲ: ವಿಪಕ್ಷಗಳಿಗೆ ತಿವಿದ ಮೋದಿ
ಇನ್ನೂ ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ಭಾಟಿಯಾ ಬ್ರ‍್ಯಾಂಡ್ ಅಂಬಾಸಿಡರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಪುನೀತ್ ಸರ್ ನಮ್ಮ ನಂದಿನಿ ಹಾಲಿಗೆ ಬ್ರ‍್ಯಾಂಡ್ ಅಂಬಾಸಿಡರ್ ಆಗಿದ್ದರು. ನಮ್ಮಲ್ಲೂ ಚರ್ಚೆ ನಡೆದಿದೆ, ಚಿತ್ರರಂಗದವರು ಚರ್ಚೆ ಮಾಡುತ್ತಿದ್ದಾರೆ. ನಮ್ಮವರು ಬ್ರ‍್ಯಾಂಡ್ ಅಂಬಾಸಿಡರ್ ಖಂಡಿತ ಆಗೇ ಆಗುತ್ತಾರೆ. ಅವಕಾಶ ಸಿಕ್ಕರೆ ನಮ್ಮ ಕನ್ನಡದ್ದು ನಾನು ಪ್ರಮೋಷನ್ ಮಾಡೇ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸಮಾಜದಲ್ಲಿ ಅಶಾಂತಿ, ಒಡಕು ಮೂಡಿಸೋದು ಬಿಜೆಪಿ ಉದ್ದೇಶ: ಶರಣಪ್ರಕಾಶ್ ಪಾಟೀಲ್