ನಟ ವಿಷ್ಣು ಪುಣ್ಯಭೂಮಿ ಹೋರಾಟಕ್ಕೆ ಡಾಲಿ ಸಾಥ್

Public TV
1 Min Read
vishnuvardhan

ವಿಷ್ಣುವರ್ಧನ್ (Vishnuvardhan) ಅಂತ್ಯ ಸಂಸ್ಕಾರವಾದ ಜಾಗದಲ್ಲಿ ಪುಣ್ಯಭೂಮಿ ಆಗಬೇಕು ಎಂದು ವಿಷ್ಣು ಅಭಿಮಾನಿಗಳು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳೆಲ್ಲರೂ ಸೇರಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ (Protest) ಹಮ್ಮಿಕೊಂಡಿದ್ದಾರೆ. ವಿಷ್ಣು ಅಭಿಮಾನಿಗಳ ಹೋರಾಟಕ್ಕೆ ನಟ ಡಾಲಿ ಧನಂಜಯ (Dolly Dhananjay) ಬೆಂಬಲ ಸೂಚಿಸಿದ್ದಾರೆ.

Vishnuvardhan 4

ಕನ್ನಡ ಚಿತ್ರರಂಗದ ಮೇರು ನಟರು, ಹಿರಿಯಣ್ಣರಲ್ಲಿ ಒಬ್ಬರಾದ ಡಾ.ವಿಷ್ಣು ಸರ್ ಪುಣ್ಯಭೂಮಿಗೆ ರಾಜಧಾನಿಯಲ್ಲಿ ಅಂಗೈಯಗಲ ಜಾಗವಿಲ್ಲವೆಂಬುದು ಯಾಕೋ ಅರಗಿಸಿಕೊಳ್ಳಲಾಗುತ್ತಿಲ್ಲ. ಸರ್ಕಾರ ಕೂಡಲೇ ಡಾ.ವಿಷ್ಣು ಸರ್ ಪುಣ್ಯಭೂಮಿ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುವೆ. ಅವರ ಅಭಿಮಾನಿಗಳ ಹೋರಾಟದಲ್ಲಿ ನಾನೂ ಇದ್ದೇನೆ. ಈ ವಿಷಯ ಬೇಗ ಸುಖಾಂತ್ಯ ಕಾಣಲಿ.  ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ.

vishnuvardhan 5

ಸುದೀಪ್ ಬೆಂಬಲ

ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಪುಣ್ಯಭೂಮಿಗಾಗಿ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ವಿಷ್ಣು ಅಭಿಮಾನಿಗಳ ಬೆಂಬಲಕ್ಕೆ ಕಿಚ್ಚ ಸುದೀಪ್‌ ನಿಂತಿದ್ದಾರೆ. ವಿಷ್ಣು ಸಮಾಧಿ, ಸ್ಮಾರಕ ವಿಚಾರವಾಗಿ ಕಿಚ್ಚ ಸುದೀಪ್‌ ತಡರಾತ್ರಿ ಟ್ವೀಟ್‌ ಮಾಡಿದ್ದಾರೆ.

vishnuvardhan with sudeep

ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಎಕ್ಸ್‌ನಲ್ಲಿ ಸುದೀಪ್‌ ಪೋಸ್ಟ್‌ ಹಾಕಿದ್ದಾರೆ.

vishnuvardhan 4

ಶನಿವಾರ ತಡರಾತ್ರಿ 12:40 ಕ್ಕೆ ಸುದೀಪ್‌ ಈ ಪೋಸ್ಟ್‌ ಹಾಕಿದ್ದಾರೆ. ಆ ಮೂಲಕ ವಿಷ್ಣುವರ್ಧನ್‌ ಅಭಿಮಾನಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಷ್ಣುವರ್ಧನ್ ಪುಣ್ಯಭೂಮಿ ವಿಚಾರವಾಗಿ ಮಾತನಾಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೂ ಸುದೀಪ್‌ ಮುಂದಾಗಿದ್ದಾರೆ ಎನ್ನಲಾಗಿದೆ.

 

ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ವಿಷ್ಣುಸೇನಾ ಸಮಿತಿಯಿಂದ ಹೋರಾಟಕ್ಕೆ ಕರೆ ನೀಡಿದ್ದು, ಫ್ರೀಡಂ ಪಾರ್ಕ್‌ನಲ್ಲಿ 10 ಗಂಟೆಗೆ ವಿಷ್ಣು ಅಭಿಮಾನಿಗಳು ಒಟ್ಟಾಗಿ ಸೇರಿದ್ದಾರೆ.

Share This Article