ಕನ್ನಡದ ಹೆಸರಾಂತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಹೊಸ ಮನೆ ಗೃಹ ಪ್ರವೇಶ ಇಂದು ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಸುಮಲತಾ ಅಂಬರೀಶ್, ನಟ ಜಗ್ಗೇಶ್ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Advertisement
ಗೃಹ ಪ್ರವೇಶದ ಪೂಜೆಗೆ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳೊಂದಿಗೆ ಮಾತನಾಡಿ, ‘ಸಾಹಸಸಿಂಹ ನಮ್ಮ ಅಚ್ಚುಮೆಚ್ಚಿನ ನಟ. ವಿಷ್ಣುವರ್ಧನ್ ಮನೆ ತುಂಬಾ ಸುಂದರವಾಗಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕದ ಕೆಲಸಗಳು ನಡೀತಿವೆ. ಸದ್ಯದಲ್ಲೇ ವಿಷ್ಣು ಸ್ಮಾರಕದ ಉದ್ಘಾಟನೆ ಸಮಾರಂಭವಾಗುತ್ತೆ. ವಿಷ್ಣು ನಮ್ಮೆಲ್ಲರಿಗೂ ಮಾದರಿ ವ್ಯಕ್ತಿತ್ವ. ವಿಷ್ಣು ಘನತೆಯನ್ನ ಎತ್ತಿಹಿಡಿಯೋ ಮ್ಯೂಸಿಯಂ ಮಾಡ್ತೀವಿ’ ಎಂದರು. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ
Advertisement
Advertisement
ಜಗ್ಗೇಶ್ ಕೂಡ ಮಾತನಾಡಿ, ‘ವಿಷ್ಣುಮನೆಗೆ ಒಂದು ಬ್ಯುಟಿಫುಲ್ ಕಥೆಯಿದೆ. ವಿಷ್ಣು ಅವರಿಗೆ ಮೊದಲು ಯಾರೋ ಭಯ ಹುಟ್ಟಿಸಿದ್ರು. ಜಯನಗರದ ಮನೆ ವಿಷ್ಣು ಸರ್ ಗೆ ಪ್ರಿಯವಾದ ಜಾಗ. ಮನೆಯಲ್ಲಿ ಒಂದೊಂದು ಜಾಗವು ಕಾಡುತ್ತೆ. ಭಾವನೆಗಳನ್ನ ಕೆದಕುತ್ತೆ. ಇದು ಮನೆಯಲ್ಲ, ನಮ್ಮ ಪಾಲಿಗೆ ದೇವಸ್ಥಾನ. ಅನಿರುದ್ದ್ ವಿಷ್ಣುವರ್ಧನ್ ಮಗನ ಸಮಾನ. ಅನಿರುದ್ದ್ ಪರವಾಗಿ ಈಗಲೂ ನಿಲ್ಲಬೇಕು’ ಎಂದರು.
Advertisement
ಗೃಹ ಪ್ರವೇಶದ ಸಮಾರಂಭಕ್ಕೆ ಸಿನಿಮಾ ರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಅನೇಕರು ಹಾಜರಿದ್ದರು. ಬೆಳಗ್ಗೆಯಿಂದಲೇ ಪೂಜೆ, ಹೋಮ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಗಳು ನಡೆದಿವೆ. ಮುಂದಿನ ತಿಂಗಳು ವಿಷ್ಣು ಸ್ಮಾರಕ ಕೂಡ ಉದ್ಘಾಟನೆ ಆಗಲಿದೆ.