ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ ಹರ್ ಘರ್ ತಿರಂಗ ಅಭಿಯಾನದಲ್ಲಿ ಚಿತ್ರರಂಗದ ತಾರೆಯರು ಸಾಥ್ ನೀಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಕೂಡ ಸಾಥ್ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯನ್ನ ತಮ್ಮ ಕುಟುಂಬದ ಜತೆ ಆಚರಿಸಿದ್ದಾರೆ.
ಯಶ್ ಮನೆಯ ಮೇಲೆ ರಾರಾಜಿಸಿತು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ತನ್ನ ಕುಟುಂಬದ ಸ್ವಾತಂತ್ರ್ಯದಿನಾಚರಣೆಯನ್ನ ಯಶ್ ಆಚರಿಸಿದ್ದಾರೆ. ಯಶ್ ಜತೆ ಪತ್ನಿ ರಾಧಿಕಾ ಪಂಡಿತ್ ಮತ್ತು ಮಕ್ಕಳು ಕೂಡ ಸಾಥ್ ನೀಡಿದ್ದಾರೆ. ಯಶ್ ಮಕ್ಕಳು ಐರಾ ಮತ್ತು ಯಥರ್ವ್ ತ್ರಿವರ್ಣ ಧ್ವಜ ಹಿಡಿದು ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ತಂದೆಯಾದ `ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಂದು ಗೌಡ
View this post on Instagram
ಪಸರಿಸಲಿ ವಿಶ್ವಕ್ಕೆಲ್ಲಾ ಭಾರತದ ತ್ರಿವರ್ಣ ಧ್ವಜದ ಹಿರಿಮೆ. ಪ್ರತಿಯೊಬ್ಬ ಭಾರತೀಯ ಹೆಮ್ಮೆಯಿಂದ ಹೇಳುವ `ಜೈ ಹಿಂದ್’. ಎಲ್ಲರಿಗೂ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳು ಎಂದು ಯಶ್ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ.
Live Tv