ಬೆಂಗಳೂರು: ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಕೆಲವರು ಯಶೋಮಾರ್ಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ರಾಕಿಂಗ್ ಸ್ಟಾರ್ ಯಶ್ ಗರಂ ಆಗಿದ್ದಾರೆ.
ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವಾಗೋ ನೆಪದಲ್ಲಿ ಕೆಲವರು ಪರಿಸ್ಥಿತಿ ದುರುಪಯೋಗಪಡಿಸಿಕೊಳ್ತಿದ್ದಾರೆ. ಕೆಲ ಕಿಡಿಕೇಡಿಗಳು ನಟ ಯಶ್ ನೇತೃತ್ವದ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ದೇಣಿಗೆ ಸಂಗ್ರಹ ಮಾಡ್ತಿದ್ದಾರೆ. ಈ ವಿಚಾರ ತಿಳಿದ ರಾಕಿಂಗ್ ಸ್ಟಾರ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊಡಗಿನ ಸಂತ್ರಸ್ತರೇ, ಪರಿಹಾರ ವೆಬ್‍ಸೈಟಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ!
Advertisement
Advertisement
ಯಶೋಮಾರ್ಗ ಹೆಸರು ಬಳಸಿ ದೇಣಿಗೆ ಸಂಗ್ರಹ ಮಾಡದಂತೆ ಆಗ್ರಹಿಸಿದ್ದಾರೆ. ನಿಮ್ಮ ಉದ್ದೇಶ ಒಳ್ಳೆಯದೇ ಆಗಿದೆ. ಆದರೆ ಅದಕ್ಕಾಗಿ ನನ್ನ ಯಶೋಮಾರ್ಗ ಹೆಸರನ್ನ ತರಬೇಡಿ. ಸ್ವಂತ ಸಂಪಾದನೆಯ ಹಣದಲ್ಲಿ ಕೈಲಾದ ಮಟ್ಟಿಗೆ ಸಮಾಜ ಸೇವೆ ಮಾಡ್ತಿದ್ದೇನೆ. ಇದಕ್ಕಾಗಿ ಜನರಿಂದ ಯಾವುದೇ ದೇಣಿಗೆ ಸ್ವೀಕರಿಸುತ್ತಿಲ್ಲ ಎಂದು ತಮ್ಮ ಫೇಸ್ ಬುಕ್ ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಯಶ್ ಹೇಳಿದ್ದೇನು?
‘ಯಶೋಮಾರ್ಗ’ ಸಂಸ್ಥೆಯ ಮೂಲಕ ನನ್ನ ಸ್ವಂತ ಸಂಪಾದನೆಯ ಹಣದಲ್ಲಿ ನನ್ನ ಆತ್ಮ ತೃಪ್ತಿಗಾಗಿ ನನ್ನ ಕೈಲಾದ ಮಟ್ಟಿಗೆ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದೇನೆ. ಇದಕ್ಕಾಗಿ ಯಾವುದೇ ದೇಣಿಗೆ/ವಂತಿಗೆಯನ್ನು ಜನರಿಂದ ಸ್ವೀಕರಿಸುತ್ತಿಲ್ಲ.
ಆದರೆ, ಇತ್ತೀಚೆಗೆ ಭಾರಿ ಮಳೆಯಿಂದಾಗಿ ನಿರಾಶ್ರಿತರಾದ ಕೊಡಗಿನ ಜನರಿಗೆ ಪರಿಹಾರ ನೀಡುವ ನೆಪದಲ್ಲಿ ಯಶೋಮಾರ್ಗದ ಹೆಸರಲ್ಲಿ ದೇಣಿಗೆ ಸಂಗ್ರಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಅವರ ಉದ್ದೇಶ ಒಳ್ಳೆಯದೇ ಆಗಿದ್ದರೂ ಇದಕ್ಕಾಗಿ ಯಶೋಮಾರ್ಗದ ಹೆಸರನ್ನು ಬಳಸಬಾರದೆಂದು ವಿನಂತಿಸುತ್ತೇನೆ.
ಸಾರ್ವಜನಿಕರ ನೆರವು ಯಶೋಮಾರ್ಗಕ್ಕೆ ಅವಶ್ಯವೆನಿಸುವ ಸಂದರ್ಭದಲ್ಲಿ ನಾನೇ ಖುದ್ದು ನಿಮ್ಮ ಮುಂದೆ ಬರುತ್ತೇನೆ. ಸಧ್ಯಕ್ಕೆ ಯಶೋಮಾರ್ಗದ ಹೆಸರಿನಲ್ಲಿ ದೇಣಿಗೆ ಕೇಳಲು ಬಂದವರಿಗೆ ದೇಣಿಗೆ ನೀಡಬೇಡಿ ಎಂದು ನಾನು ಈ ಸಂದರ್ಭದಲ್ಲಿ ತಿಳಿಸಬಯಸುತ್ತೇನೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv