ಬೆಂಗಳೂರು: ಸ್ಯಾಂಡಲ್‍ವುಡ್ ಕ್ಯೂಟ್ ಕಪಲ್ ಆಗಿರುವ ಯಶ್, ರಾಧಿಕಾ ದುಬೈನಲ್ಲಿ ಜಾಲಿ ಮೂಡ್‍ನಲ್ಲಿ ಸುತ್ತಾಟ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಕೆಲವು ವೀಡಿಯೋ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದ ಯಶ್ ಈಗ ತಮ್ಮ ಮಡದಿ ರಾಧಿಕಾ ಪಂಡಿತ್ ಜೊತೆ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.
ರಾಧಿಕಾ ಪಂಡಿತ್ ಹಾಗೂ ಯಶ್ ಅವರು ದುಬೈಗೆ ಕಾಲಿಡುತ್ತಿದ್ದಂತೆಯೇ ಅಲ್ಲಿನ ಅಧಿಕಾರಿಗಳು ಈ ಜೋಡಿಯನ್ನು ಬರ ಮಾಡಿಕೊಂಡಿದ್ದಾರೆ. ಯಶ್ ಅವರ ಜೊತೆ ಅವರ ಅಭಿಮಾನಿಗಳು ಫೋಟೋಗಳನ್ನು ತೆಗೆಸಿಕೊಳ್ಳುತ್ತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಧಿಕಾ ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟು ಸಿಂಪಲ್ ಆಗಿ ಕಾಣಿಸಿಕೊಂಡಿದ್ದಾರೆ. ಯಶ್ ಹೊಸ ಹೇರ್ ಸ್ಟೈಲ್‍ನಲ್ಲಿ ಖಡಕ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಖತ್ ಸ್ಟೈಲಿಶ್ ಆಗಿ ಮುಂಬೈನಲ್ಲಿ ಕಾಣಿಸಿಕೊಂಡ ಯಶ್
View this post on Instagram
ಮಕ್ಕಳ ಜೊತೆಗೆ ಮಾಲ್ಡೀವ್ಸ್ ಪ್ರವಾಸ ಮಾಡಿದ್ದ ಈ ಜೋಡಿ ಇದೀಗ ಇಬ್ಬರೇ ದುಬೈಗೆ ಹೋಗಿ ಸುತ್ತಾಡುತ್ತಿದ್ದಾರೆ. ಯಶ್ ಕೆಲವು ದಿನಗಳ ಹಿಂದೆ ಮುಂಬೈ ವಿಮಾನ ನಿಲ್ದಾಣ ಮತ್ತು ಸಲೂನ್‍ವೊಂದರಲ್ಲಿ ಕಾಣಿಸಿಕೊಂಡಿದ್ದರು. ಆಗ ಯಶ್ ಅವರ ಹೇರ್ ಸ್ಟೈಲ್ ಸುದ್ದಿಯಾಗಿತ್ತು. ಇದನ್ನೂ ಓದಿ: ಯಶ್ ಜೊತೆ ಸೆಲ್ಫಿಗೆ ಮುಗಿಬಿದ್ದ ಮುಂಬೈ ಅಭಿಮಾನಿಗಳು
ಯಶ್ ಮುಂಬೈನಲ್ಲಿ ಕಾಣಿಸಿಕೊಂಡಿದ್ದ ವೇಳೆ ಅಭಿಮಾನಿಗಳು ಯಶ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ದೇಶ, ವಿದೇಶಗಳಲ್ಲಿ ಯಶ್ ಅವರಿಗೆ ಅಭಿಮಾನಿಗಳಿದ್ದಾರೆ. ಕೆಜಿಎಫ್ ಸಿನಿಮಾದಲ್ಲಿ ಯಶ್ ಉದ್ದ ಕೂದಲು ಮೂಲಕವಾಗಿ ಮಿಂಚಿದ್ದರು. ಅಭಿಮಾನಿಗಳು ಯಶ್ ಅವರ ಉದ್ದ ಗಡ್ಡ, ಕೂದಲಿನ ಸ್ಟೈಲ್ ಇಷ್ಟವಾಗಿತ್ತು. ಇದೀಗ ಕೆಜಿಎಫ್2 ಸಿನಿಮಾದಲ್ಲೂ ಯಶ್ ಅದೇ ಖಡಕ್ ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಬಿಡುಗಡೆಯಾಗಿ ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇದನ್ನೂ ಓದಿ: ಯಶ್ ಹೇರ್ ಸ್ಟೈಲ್‍ಗೆ ಅಭಿಮಾನಿಗಳು ಫಿದಾ