ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ (Actor Siddarth) ಮತ್ತು ಅದಿತಿ ರಾವ್ ಹೈದರಿ (Aditi Rao Hydari) ಇಂದು (ಸೆ.16) ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಮದುವೆಯ ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
View this post on Instagram
ಹಲವು ವರ್ಷಗಳ ಪ್ರೀತಿಗೆ ಇಂದು ಸಿದ್ಧಾರ್ಥ್, ಅದಿತಿ ರಾವ್ ಮದುವೆಯ ಮುದ್ರೆ ಒತ್ತಿದ್ದಾರೆ. 400 ವರ್ಷಗಳ ಹಿಂದಿನ ವನಪರ್ತಿ ಪುರಾತನ ದೇವಸ್ಥಾನದಲ್ಲಿ ಈ ಜೋಡಿ ಹಸೆಮಣೆ ಏರಿದೆ. ಇನ್ನೂ ಸಿದ್ಧಾರ್ಥ್ ಜೊತೆಗಿನ ಅದಿತಿ ಮದುವೆಯ ಫೋಟೋ ಶೇರ್ ಮಾಡಿ, ನೀವೇ ನನ್ನ ಸೂರ್ಯ, ನೀವೇ ನನ್ನ ಚಂದ್ರ ಮತ್ತು ನನ್ನ ಎಲ್ಲಾ ನಕ್ಷತ್ರಗಳು ಎಂದು ಬರೆದುಕೊಂಡಿದ್ದಾರೆ. ಶಾಶ್ವತ ಪ್ರೀತಿ, ಬೆಳಕು, ಮ್ಯಾಜಿಕ್ ಪ್ರಾರಂಭ ಎಂದಿದ್ದಾರೆ ನಟಿ.
ಅದಿತಿ ಮತ್ತು ಸಿದ್ಧಾರ್ಥ್ ಇಬ್ಬರಿಗೂ ಇದು 2ನೇ ಮದುವೆಯಾಗಿದೆ. ಮೊದಲ ಮದುವೆಗೆ ಡಿವೋರ್ಸ್ ನೀಡಿದ ಬಳಿಕ ಸಿನಿಮಾವೊಂದರ ಚಿತ್ರೀಕರಣದಲ್ಲಿ ಪರಿಚಯವಾಗಿ ಇಂದು ಮದುವೆ ಮುನ್ನುಡಿ ಬರೆದಿದೆ. ಹೊಸ ಜೋಡಿಗೆ ಸಿನಿಮಾ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.