ಇತ್ತೀಚೆಗಷ್ಟೇ ನಟಿ ಅದಿತಿ ರಾವ್ ಹೈದರ್ ಮತ್ತು ತೆಲುಗು ನಟ ಸಿದ್ಧಾರ್ಥ ಎಂಗೇಜ್ ಆದ ವಿಷಯ ಬಹಿರಂಗವಾಗಿತ್ತು. ಆಪ್ತರಿಗೂ ಈ ವಿಷಯ ತಿಳಿಸದೇ ಕೇವಲ ಕುಟುಂಬಸ್ಥರು ಸೇರಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಮುಗಿಸಿದ್ದರು. ಇದು ಗಾಸಿಪ್ ರೀತಿಯಲ್ಲಿ ಹರಡಿತ್ತಾದರೂ, ಯಾರೂ ವಿಷಯವನ್ನು ಖಚಿತ ಪಡಿಸಿರಲಿಲ್ಲ. ನಂತರ ಅದಿತಿ ಅವರೇ ಈ ವಿಷಯ ಹಂಚಿದ್ದರು.
Advertisement
ಹೌದು, ನಿಶ್ಚಿತಾರ್ಥದ ವಿಷಯವು ಬಹಿರಂಗವಾಗಲು ತಮ್ಮ ತಾಯಿಯೇ ಕಾರಣ ಎಂದಿದ್ದಾರೆ ನಟಿ. ನಾನು ಎಂಗೇಜ್ ಮೆಂಟ್ ಮಾಡಿಕೊಂಡ ವಿಷಯವನ್ನು ಯಾರಿಗೂ ಹೇಳಿರಲಿಲ್ಲ. ಆದರೂ, ಗೊತ್ತಾಗಿತ್ತು. ಅಮ್ಮನಿಗೆ ಪದೇ ಪದೇ ಕಾಲ್ ಮಾಡಿ ಕೇಳುತ್ತಿದ್ದರು. ಹಾಗಾಗಿ ಅವರೇ ಈ ವಿಷಯವನ್ನು ತಿಳಿಸಿ ಬಿಡು ಅಂದಿದ್ದರು ಎಂದಿದ್ದಾರೆ ಅದಿತಿ.
Advertisement
Advertisement
ಆಗಿದ್ದು ನಿಶ್ಚಿತಾರ್ಥವಾದರೂ, ಸೋಷಿಯಲ್ ಮೀಡಿಯಾದಲ್ಲಿ ಅದಿತಿ ರಾವ್ ಹೈದರಿ(Aditi Rao Hydari) ಸಿದ್ಧಾರ್ಥ್ (Siddarth) ಸದ್ದಿಲ್ಲದೇ ಮದುವೆಯಾ ಆಗಿದ್ದಾರೆ ಎಂದು ಸುದ್ದಿ ಆಗಿತ್ತು. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎಂದು ಸುದ್ದಿ ಹಬ್ಬಿಸಿದ್ದರು.
Advertisement
ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಅವರ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗಿತ್ತು. ಶೂಟಿಂಗ್ ಎಂದು ಸುಳ್ಳು ಹೇಳಿ ಇಬ್ಬರೂ ಮದುವೆ ಆಗಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಎಲ್ಲದಕ್ಕೂ ಅದಿತಿ ಉತ್ತರ ನೀಡಿದ್ದರು. ಹಿ ಸೇಡ್ ಎಸ್.. ಎಂಗೇಜ್ಡ್’ (Engaged) ಎಂದು ಸಿದ್ಧಾರ್ಥನ ಜೊತೆಗಿರುವ ಫೋಟೋ ಹಂಚಿಕೊಂಡಿದ್ದರು.
ಈ ಜೋಡಿ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿತ್ತು. ಆದರೆ ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ ವರ್ಷದಂದು ಮದುವೆ (Wedding) ಬಗ್ಗೆ ಸುಳಿವು ನೀಡಿದ್ದರು ಅದಿತಿ ರಾವ್.
ನ್ಯೂ ಇಯರ್ ಸಂಭ್ರಮವನ್ನು ನಟಿ ಅದಿತಿ- ಸಿದ್ಧಾರ್ಥ್ ಜೋಡಿ ವಿದೇಶದಲ್ಲಿ ಸೆಲೆಬ್ರೇಟ್ ಮಾಡಿದ್ದರು. ಈ ಕುರಿತ ಇಬ್ಬರೂ ಕೂಡ ಚೆಂದದ ಫೋಟೋ ಶೇರ್ ಮಾಡಿ ಅಭಿಮಾನಿಗಳಿಗೆ ಶುಭಕೋರಿದ್ದರು. ಈ ಮೂಲಕ ಎಂಗೇಜ್ ಆಗಿರೋದು ಖಚಿತವಾಗಿತ್ತು. ಫೋಟೋ ಶೇರ್ ಮಾಡ್ತಿದ್ದಂತೆ ಮದುವೆ ಯಾವಾಗ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದರು.