ಬಂಗಾಲಿ ಖ್ಯಾತ ನಟಿ (Bengali Actress) ಐಂದ್ರಿಲಾ ಶರ್ಮಾ(Aindrila Sharma) ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ನಿನ್ನೆ ರಾತ್ರಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು (ನ.20) ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
View this post on Instagram
ಬೆಂಗಾಲಿಯ ಸಾಕಷ್ಟು ಸೀರಿಯಲ್ ಮೂಲಕ ಮೋಡಿ ಮಾಡಿದ್ದ ಐಂದ್ರಿಲಾ ಶರ್ಮಾ ಅವರು ಕೊನೆಯುಸಿರೆಳೆದಿದ್ದಾರೆ. ನಟಿ ಅನಾರೋಗ್ಯದಿಂದ ಬಳಲುತ್ತಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾರದ ಲೋಕಕ್ಕೆ ಹೋಗಿದ್ದಾರೆ. ಐಂದ್ರಿಲಾ ಶರ್ಮಾ ಅನಾರೋಗ್ಯದ ಸುದ್ದಿ ಹಬ್ಬುತ್ತಿದ್ದಂತೆ ಬಾಯ್‌ಫ್ರೆಂಡ್ ವದಂತಿಯನ್ನು ತಳ್ಳಿ ಹಾಕಿದ್ದರು. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಿಪಿಆರ್ ಮಾಡಲಾಯಿತು. ಆದರೆ ಐಂದ್ರಿಲಾ ದೇಹ ಸ್ಪಂದಿಸಲಿಲ್ಲ. ಹಾಗಾಗಿ ಅವರನ್ನು ವೆಂಟಿಲೇಟರ್ ಬೆಂಬಲಕ್ಕೆ ಇರಿಸಲಾಯಿತು. ಐಂದ್ರಿಲಾ ಸ್ಥಿತಿ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ 24ನೇ ವಯಸ್ಸಿಗೆ ಐಂದ್ರಿಲಾ ಬದುಕಿನ ಆಟ ನಿಲ್ಲಿಸಿದ್ದಾರೆ. ಇದನ್ನೂ ಓದಿ:ನಿನ್ನ ಯಾರು ಮದುವೆ ಆಗ್ತಾರೆ ಎಂದು ಗೇಲಿ ಮಾಡಿದವರಿಗೆ ಗೀತಾ ಭಟ್ ಖಡಕ್ ಉತ್ತರ
Advertisement
Advertisement
ಐಂದ್ರಿಲಾ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬಂಗಾಲಿ ಕಿರುತೆರೆ ಕಲಾವಿದರು ಸಂತಾಪ ಸೂಚಿಸುತ್ತಿದ್ದಾರೆ. ಅಂದಹಾಗೆ ನಟಿ ಐಂದ್ರಿಲಾ ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದರು. ಇತ್ತೀಚಿಗಷ್ಟೆ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದರು. ಕ್ಯಾನ್ಸರ್ ಗೆದ್ದ ನಟಿ ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದರು. ಆದರೆ ವಿಧಿ ಆಟವೇ ಬೇರೆಯಾಗಿತ್ತು ಕ್ಯಾನ್ಸರ್‌ನಿಂದ ಗುಣಮುಖರಾಗುತ್ತಿದ್ದಂತೆ ಐಂದ್ರಿಲಾ ಬ್ರೈನ್ ಸ್ಟ್ರೋಕ್‌ಗೆ ಒಳಗಾದರು. ಮತ್ತೆ ಐಂದ್ರಿಲಾ ಆಸ್ಪತ್ರೆಗೆ ದಾಖಲಾದರು. ಎರಡೂ ಕಾಯಿಲೆಯಿಂದ ಸುಧಾರಿಸಿಕೊಂಡಿದ್ದ ಐಂದ್ರಿಲಾ ಇದೀಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.