Connect with us

Bengaluru City

ಶೇಖ್ ಫೈಝಿಲ್ ನನಗೆ ಪರಿಚಯವಿಲ್ಲ: ಐಂದ್ರಿತಾ ರೇ

Published

on

-ಸಿನ್ಮಾ ಪ್ರಮೋಟ್‍ಗಾಗಿ ಹೋಗಿದ್ದೆ
-ನನ್ನ ಜೊತೆ ಸೊಹೈಲ್, ಅರ್ಬಾಜ್ ಇದ್ರು

ಬೆಂಗಳೂರು: ನಾನು ಸಿನಿಮಾ ಪ್ರಮೋಶನ್ ಗಾಗಿ ಕೊಲಂಬೋದಲ್ಲಿರುವ ಕ್ಯಾಸಿನೋಗೆ ಹೋಗಿದ್ದೆ. ಚಿತ್ರ ಪ್ರಚಾರಕ್ಕಾಗಿ ನಮ್ಮ ಮ್ಯಾನೇಜರ್ ಹೋಗಬೇಕು ಅಂತ ಹೇಳಿದ್ದರಿಂದ ಸೊಹೈಲ್ ಮತ್ತು ಅರ್ಬಾಜ್ ಖಾನ್ ಜೊತೆ ಹೋಗಿದ್ದೇನೆ. ಶೇಖ್ ಫೈಝಿಲ್ ನನಗೆ ವೈಯಕ್ತಿಯ ಪರಿಚಯವಿಲ್ಲ ಎಂದು ಐಂದ್ರಿಯಾ ರೇ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

ಅರ್ಬಾಜ್ ಖಾನ್ ಜೊತೆ ‘ಮೇ ಜರೂರ್ ಆವೂಂಗಾ’ ಸಿನಿಮಾ ಮಾಡುತ್ತಿರುವಾಗ ಕ್ಯಾಸಿನೋಗೆ ಹೋಗಿದ್ದೇನೆ. ಅಲ್ಲಿ ಸಿನಿಮಾ ಪ್ರಮೋಶನ್ ಚೆನ್ನಾಗಿ ಆಗುತ್ತೆ ಅಂತಾ ಹೇಳಿದ್ದರಿಂದ ಚಿತ್ರತಂಡ ನಮ್ಮನ್ನ ಕ್ಯಾಸಿನೋಗೆ ಕಳುಹಿಸಿದ್ದರು. ಕ್ಯಾಸಿನೋ ಪಾರ್ಟಿಗೆ ತೆರಳಿರುವ ಫೋಟೋಗಳು ನನ್ನ ಇನ್‍ಸ್ಟಾಗ್ರಾಂನಲ್ಲಿವೆ. ಯಾವ ಫೋಟೋ ಮತ್ತು ವಿಡಿಯೋಗಳನ್ನ ಡಿಲೀಟ್ ಮಾಡಿಲ್ಲ. ಪ್ರೊಫೆಷನಲ್ ಗಾಗಿ ಕ್ಯಾಸಿನೋಗೆ ಹೋಗಿದ್ದೆ, ಎರಡು ಬಾರಿ ಸ್ಟೆಪ್ ಹಾಕಿ ಬಂದಿದ್ದೇನೆ. ಕರೀಷ್ಮಾ ಕಪೂರ್, ಸೊಹೈಲ್ ಖಾನ್, ಅರ್ಬಾಜ್ ಖಾನ್ ಜೊತೆ ನನ್ನ ಜೊತೆ ಬಂದಿದ್ದರು.

ಎರಡನೇ ಬಾರಿ ಅರ್ಬಾಜ್ ಖಾನ್ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನ ಹೋಟೆಲ್ ನಲ್ಲಿ ಪಾರ್ಟಿ ಮಾಡಲಾಗಿತ್ತು. ಬರ್ತ್ ಡೇ ಪಾರ್ಟಿ ವೇಳೆ ಫೈಝಿಲ್ ಬಂದಿದ್ದ. ಆದ್ರೆ ಅವನನ್ನ ನಾನು ಭೇಟಿಯಾಗಿರಲಿಲ್ಲ. ಪಾರ್ಟಿಯಲ್ಲಿದ್ದಾಗ ಸಹಜವಾಗಿ ಫೈಝಿಲ್ ಜೊತೆಗೆ ಫೋಟೋ ತೆಗೆಸಿಕೊಳ್ಳಲಾಗಿತ್ತು. ಕೆಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿವೆ. ಎರಡು ಬಾರಿಯೂ ಅರ್ಬಾಜ್ ಖಾನ್ ಮೂಲಕವೇ ಫೈಝಿಲ್ ಭೇಟಿಯಾಗಿದೆ. ಅರ್ಬಾಜ್ ಖಾನ್ ಬರ್ತ್ ಡೇ ಪಾರ್ಟಿ ವೇಳೆ ಮಾಧ್ಯಮದವರು ಸಹ ಇದ್ರು. 10 ರಿಂದ 20 ನಿಮಿಷ ನಾನು ಅಲ್ಲಿದ್ದು ಹೊರ ಬಂದಿದ್ದೇನೆ. ಆಗ ಯಾರಿಗೂ ಫಾಝಿಲ್ ಬಗ್ಗೆ ನಮಗೂ ಗೊತ್ತಿರಲಿಲ್ಲ ಎಂದು ತಿಳಿಸಿದರು.

ಶ್ರೀಲಂಕಾದ ಕ್ಯಾಸಿನೋಗೆ ಹಬ್ಬದ ಸಮಯದಲ್ಲಿ ಸಿನಿಮಾದ ದೊಡ್ಡ ದೊಡ್ಡ ತಾರೆಯರನ್ನ ಕರೆಸುತ್ತಾರೆ. ನಮಗೂ ಆ ರೀತಿಯ ಆಹ್ವಾನಗಳು ಬರುತ್ತವೆ. ಆಹ್ವಾನ ಬಂದಾಗ ಆ ವ್ಯಕ್ತಿಯ ಹಿನ್ನೆಲೆ ಚೆಕ್ ಮಾಡಲು ಆಗಲ್ಲ. ಪಾರ್ಟಿಗಳಲ್ಲಿ ಫೋಟೋ ತೆಗೆದುಕೊಳ್ಳುವಾಗ ಪ್ರತಿಯೊಬ್ಬರ ಹಿನ್ನೆಲೆ ಕೇಳಲು ಆಗಲ್ಲ. ಫೋಟೋ ತೆಗೆದುಕೊಂಡವರು ತಪ್ಪು ಮಾಡಿದ್ರೆ ನಮ್ಮನ್ನ ಪ್ರಶ್ನೆ ಮಾಡೋದು ತಪ್ಪು ಎಂದರು.

Click to comment

Leave a Reply

Your email address will not be published. Required fields are marked *