ಬಾಲಿವುಡ್ ಬೆಡಗಿ ಐಶ್ವರ್ಯಾ ರೈ (Aishwarya Rai) ಮತ್ತು ಅಭಿಷೇಕ್ ಬಚ್ಚನ್ (Abhishek Bachchan) ದಂಪತಿಯ ವೈಯಕ್ತಿಕ ಜೀವನ ಸರಿಯಿಲ್ಲ ಎಂದು ಆಗಾಗ ಡಿವೋರ್ಸ್ ಕುರಿತು ಸುದ್ದಿ ಹರಿದಾಡುತ್ತಲೇ ಇತ್ತು. ಈಗ ಆ ಡಿವೋರ್ಸ್ (Divorce) ವದಂತಿಗೆ ಐಶ್ವರ್ಯಾ ರೈ ದಂಪತಿ ಬ್ರೇಕ್ ಹಾಕಿದ್ದಾರೆ. ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡು ಗಾಸಿಪ್ ಮಂದಿಯ ಬಾಯಿ ಮುಚ್ಚಿಸಿದ್ದಾರೆ. ಇದನ್ನೂ ಓದಿ:ರಿಲೇಷನ್‌ಶಿಪ್ ವದಂತಿ ನಡುವೆ ವಿಜಯ್ ದೇವರಕೊಂಡ ಫ್ಯಾಮಿಲಿಗೆ ‘ಪುಷ್ಪ 2’ ತೋರಿಸಿದ ರಶ್ಮಿಕಾ ಮಂದಣ್ಣ
ಕುಟುಂಬದ ಕಾರ್ಯಕ್ರಮವೊಂದರಲ್ಲಿ ಐಶ್ವರ್ಯಾ ಮತ್ತು ಅಭಿಷೇಕ್ ಕಪ್ಪು ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಪತ್ನಿ ಐಶ್ವರ್ಯಾ ಮತ್ತು ಅತ್ತೆ ಜೊತೆ ನಿಂತು ಅಭಿಷೇಕ್ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಇಬ್ಬರೂ ಖುಷಿಯಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಹರಿದಾಡುತ್ತಿರುವ ಫೋಟೋ ನೋಡಿ ಗಾಸಿಪ್ ಮಂದಿ ಸೈಲೆಂಟ್ ಆಗಿದ್ದಾರೆ.
View this post on Instagram
ಇನ್ನೂ ಇತ್ತೀಚೆಗೆ ಅಂಬಾನಿ ಮನೆ ಮಗನ ಮದುವೆಯಲ್ಲಿ ಅಭಿಷೇಕ್ ಫ್ಯಾಮಿಲಿ ಜೊತೆ ನಿಲ್ಲದೇ ಮಗಳೊಂದಿಗೆ ಪ್ರತ್ಯೇಕವಾಗಿ ನಿಂತು ಕ್ಯಾಮೆರಾಗೆ ಪೋಸ್ ನೀಡಿದರು. ಅಲ್ಲಿಂದ ಒಂದಲ್ಲಾ ಒಂದು ವಿಚಾರವಾಗಿ ಇಬ್ಬರ ಡಿವೋರ್ಸ್ ಕುರಿತು ಚರ್ಚೆ ನಡೆಯುತ್ತಲೇ ಇತ್ತು. ಇದೀಗ ಜೊತೆಯಾಗಿ ಈ ಜೋಡಿ ಕಾಣಿಸಿಕೊಂಡು ಎಲ್ಲರ ಪ್ರಶ್ನೆಗಳಿಗೂ ಉತ್ತರ ಸಿಗುವಂತೆ ಮಾಡಿದ್ದಾರೆ.