ಬಿಟೌನ್ ಬೆಡಗಿ ಆಲಿಯಾ ಭಟ್ (Alia Bhatt) ಇದೀಗ ಮತ್ತೊಂದು ಬಂಪರ್ ಆಫರ್ ಅನ್ನು ಗಿಟ್ಟಿಸಿಕೊಂಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಸಕ್ಸಸ್ ನಂತರ ‘ಲವ್ & ವಾರ್’ ಕಥೆ ಹೇಳೋದಕ್ಕೆ ರೆಡಿಯಾಗಿದ್ದಾರೆ. 3 ವರ್ಷಗಳ ನಂತರ ಮತ್ತೆ ಸಂಜಯ್ ಲೀಲಾ ಬನ್ಸಾಲಿ ಜೊತೆ ಸಿನಿಮಾ ಮಾಡಲು ಆಲಿಯಾ ಭಟ್ ಸಾಥ್ ನೀಡುತ್ತಿದ್ದಾರೆ.
ಮದುವೆಯಾದ್ಮೇಲೆ ನಟಿಯರಿಗೆ ಡಿಮ್ಯಾಂಡ್ ಕಮ್ಮಿ ಎಂಬ ಮಾತಿದೆ. ಆದರೆ ಆಲಿಯಾ ಭಟ್ ಆ ಮಾತನ್ನು ಸುಳ್ಳು ಮಾಡಿದ್ದಾರೆ. ಮಗು ಆದ್ಮೇಲೆಯೂ ಫಿಟ್‌ನೆಸ್ ಕಡೆ ಹೆಚ್ಚು ಗಮನ ಕೊಡುತ್ತಿರುವ ಆಲಿಯಾ ಈಗ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ.
ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sajay Leela Bansali) ಅಡ್ಡಾಗೆ ಆಲಿಯಾ ಭಟ್ ಎಂಟ್ರಿ ಕೊಟ್ಟಿದ್ದಾರೆ. ‘ಲವ್ & ವಾರ್’ (Love & War) ಎಂಬ ಚಿತ್ರದಲ್ಲಿ ಆಲಿಯಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಮತ್ತೊಮ್ಮೆ ರಣ್‌ಬೀರ್ ಕಪೂರ್ (Ranbir Kapoor) ಜೊತೆ ತೆರೆಯ ಮೇಲೆ ಆಲಿಯಾ ರೊಮ್ಯಾನ್ಸ್ ಮಾಡಲಿದ್ದಾರೆ. ‘ಬ್ರಹ್ಮಾಸ್ತ್ರ’ ನಂತರ ಮತ್ತೆ ಈ ಜೋಡಿ ಲವ್ & ವಾರ್ ಚಿತ್ರದಲ್ಲಿ ಜೊತೆಯಾಗಿ ನಟಿಸಲಿದ್ದಾರೆ. ಇದನ್ನೂ ಓದಿ:ನಟಿ ದೀಪಿಕಾ ಪಡುಕೋಣೆಗೆ ಆಸ್ಕರ್ ಗೌರವ
ಅದಷ್ಟೇ ಅಲ್ಲ, ಬಾಲಿವುಡ್ ನಟ ವಿಕ್ಕಿ ಕೌಶಲ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಲಿಯಾ ಈ ಚಿತ್ರದಲ್ಲಿ ಗಾಯಕಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೊಂದು ಎಮೋಷನಲ್ ಡ್ರಾಮ ಇರುವ ಚಿತ್ರವಾಗಿದೆ. ನವೆಂಬರ್‌ನಲ್ಲಿ ಶೂಟಿಂಗ್ ಶುರುವಾಗಲಿದ್ದು, ಮುಂದಿನ ವರ್ಷ ಕ್ರಿಸ್‌ಮಸ್ ವೇಳೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.
ಮೊದಲ ಬಾರಿಗೆ ಆಲಿಯಾ ಭಟ್, ವಿಕ್ಕಿ ಕೌಶಲ್, ರಣ್‌ಬೀರ್ ಕಪೂರ್ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಟ್ರಯೋ ಕಥೆ ನೋಡುವುದಕ್ಕೆ ಅಭಿಮಾನಿಗಳು ಎದುರು ನೋಡ್ತಿದ್ದಾರೆ.