ಕನ್ನಡದ ‘ಹೆಬ್ಬುಲಿ’ (Hebbuli) ನಟಿ ಅಮಲಾ ಪೌಲ್ (Amala Paul) ಅವರು ಸದ್ಯ ‘ಆಡುಜೀವಿತಂ’ (Aadujeevitham) ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರ್‌ಗೆ ನಾಯಕಿಯಾಗಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಬೋಲ್ಡ್ ಬಟ್ಟೆಯಲ್ಲಿ ಕಾಣಿಸಿಕೊಂಡ ಅಮಲಾಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಬಟ್ಟೆ ಮ್ಯಾಟರ್‌ಗೆ ನಟಿಯ ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ.
ಇತ್ತೀಚೆಗೆ ನಟಿ ಅಮಲಾ ಅವರು ಉದ್ಯಮಿ ಜಗತ್ ದೇಸಾಯಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ ಒಂದು ತಿಂಗಳ ನಂತರ ತಾಯಿಯಾಗಿರುವ ಗುಡ್ ನ್ಯೂಸ್ ತಿಳಿಸಿದ್ದರು. ಚೊಚ್ಚಲ ಮಗುವಿನ ಆಗಮನಕ್ಕೆ ಎದುರು ನೋಡ್ತಿರುವಾಗ ತಾವು ನಟಿಸಿರುವ ಸಿನಿಮಾಗೂ ಪ್ರಚಾರಕ್ಕೆ ನಟಿ ಸಾಥ್ ನೀಡುತ್ತಿದ್ದಾರೆ. ಇದನ್ನೂ ಓದಿ:ಆತ್ಮವಾಗಿ ಕಾಣಿಸಿಕೊಂಡ ಅನುಷ್ಕಾ ಶೆಟ್ಟಿ
ಇದೀಗ ಸಂದರ್ಶನಕ್ಕೆ ಬರುವಾಗ ಕಡುನೀಲಿ ಬಣ್ಣದ ಸ್ಲೀವ್‌ಲೆಸ್ ಡ್ರೆಸ್ ಧರಿಸಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನೆಗೆಟಿವ್ ಕಾಮೆಂಟ್ ಹಾಕಿದ್ದಾರೆ. ಇದೆಂಥಾ ಡ್ರೆಸ್ ಬೆಡ್‌ನಿಂದ ಎದ್ದ ಕೂಡಲೇ ಬಾತ್‌ರೂಮ್‌ಗೆ ಹಾಕಿಕೊಂಡು ಹೋಗುವ ಡ್ರೆಸ್ ಎಂದು ನೆಟ್ಟಿಗರೊಬ್ಬರು ಕುಟುಕಿದ್ದಾರೆ. ನಾನು ಅಮಲಾ ಪೌಲ್ ದೊಡ್ಡ ಅಭಿಮಾನಿಯಾಗಿದ್ದೆ. ಈಗ ಅಭಿಮಾನಿಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ನಟಿಯ ವಿಡಿಯೋ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಆದರೆ ನೆಗೆಟಿವ್ ಕಾಮೆಂಟ್‌ಗೆ ನಟಿ ಕ್ಯಾರೆ ಎನ್ನದೇ ತಮ್ಮ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ ‘ಆಡುಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.
ನಿರ್ದೇಶಕ ಬ್ಲೆಸ್ಸಿ ಅವರ 15 ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ;ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.
ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.
ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ 5 ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ. ಇದೇ ಮಾರ್ಚ್ 28ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.