ಕನ್ನಡದ ‘ವಿಲನ್’ ( The Villain) ಚಿತ್ರದ ನಟಿ ಆ್ಯಮಿ ಜಾಕ್ಸನ್ (Amy Jackson) ಅವರು ಗೆಳೆಯ ಎಡ್ ವೆಸ್ಟ್‌ವಿಕ್ (Ed Westwick) ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇಟಲಿಯಲ್ಲಿ (Italy) ಅದ್ಧೂರಿಯಾಗಿ ನಟಿಯ ಮದುವೆ ನಡೆಯಲಿದೆ. ಇದನ್ನೂ ಓದಿ:‘ಸ್ತ್ರೀ 2’ ನಟಿಗೆ ಹೆಚ್ಚಿದ ಬೇಡಿಕೆ- ಹೃತಿಕ್ ರೋಷನ್‌ಗೆ ಶ್ರದ್ಧಾ ಕಪೂರ್ ಜೋಡಿ
ಭಾವಿ ಪತಿಗೆ ಆ್ಯಮಿ ಲಿಪ್‌ಲಾಕ್ ಮಾಡುತ್ತಿರುವ ಫೋಟೋ ಶೇರ್ ಮಾಡಿ, ನಾವು ಮದುವೆಯಾಗೋಣ ಬೇಬಿ ಎಂದು ಅಡಿಬರಹ ನೀಡಿದ್ದಾರೆ. ಈ ಮೂಲಕ ಮದುವೆಯಾಗುವ ಬಗ್ಗೆ ನಟಿ ಸುಳಿವು ನೀಡಿದ್ದಾರೆ.
View this post on Instagram
- Advertisement
ಬ್ರಿಟಿಷ್ ನಟಿ ಆ್ಯಮಿ ಮದುವೆ ಇಟಲಿಯಲ್ಲಿ ನಡೆಯಲಿದೆ ಎಂಬುದಷ್ಟೇ ರಿವೀಲ್ ಆಗಿದೆ. ಯಾವ ದಿನಾಂಕದಂದು ಮದುವೆ ಎಂಬುದನ್ನು ನಟಿ ಗೌಪ್ಯವಾಗಿಟ್ಟಿದ್ದಾರೆ. ಇದನ್ನೂ ಓದಿ:ನಾನು ಸೆಲೆಬ್ರಿಟಿಯೇ ಹೊರತು ಸಾರ್ವಜನಿಕರ ಆಸ್ತಿಯಲ್ಲ- ಟ್ರೋಲಿಗರಿಗೆ ತಾಪ್ಸಿ ಪನ್ನು ವಾರ್ನಿಂಗ್
- Advertisement
ಅಂದಹಾಗೆ, ಎಂಗೇಜ್‌ಮೆಂಟ್ ಬಳಿಕ ಜೂನ್‌ನಲ್ಲಿ ನಟಿ ಬ್ಯಾಚುರಲ್ ಪಾರ್ಟಿ ಮಾಡಿದ್ದರು. ಖಾಸಗಿ ಜೆಟ್‌ನಲ್ಲಿ ನಡೆಯ ಪಾರ್ಟಿ ಫೋಟೋಗಳನ್ನು ಆ್ಯಮಿ ಹಂಚಿಕೊಂಡಿದ್ದರು.
2019ರಲ್ಲಿ ನಟ ಜಾರ್ಜ್ ಎಂಬುವವರ ಜೊತೆ ಆ್ಯಮಿ ಡೇಟಿಂಗ್ ಮಾಡುತ್ತಿದ್ದರು. ಇದೇ ವರ್ಷ ಸೆಪ್ಟೆಂಬರ್‌ನಲ್ಲಿ ಗಂಡು ಮಗುವನ್ನು ಈ ಜೋಡಿ ಸ್ವಾಗತಿಸಿದ್ದರು. ಕೆಲ ಮನಸ್ತಾಪಗಳಿಂದ 2021ರಲ್ಲಿ ಜಾರ್ಜ್ ಜೊತೆ ನಟಿ ಬ್ರೇಕಪ್ ಮಾಡಿಕೊಂಡರು. ಜಾರ್ಜ್ ಜೊತೆಗಿನ ಅಷ್ಟು ಫೋಟೋಗಳನ್ನು ಇನ್ಸ್ಟಾಗ್ರಾಂ ಖಾತೆಯಿಂದ ಡಿಲೀಟ್ ಮಾಡಿದರು. ಬಳಿಕ ಮಾಜಿ ಬಾಯ್ ಫ್ರೆಂಡ್‌ಗೆ ಮಗನ ಜವಾಬ್ದಾರಿಯನ್ನು ಬಿಟ್ಟು ಕೊಡದೇ ತಾವೇ ನೋಡಿಕೊಳ್ತಿದ್ದಾರೆ.
ಇನ್ನೂ ಶಿವರಾಜ್ ಕುಮಾರ್, ಸುದೀಪ್ ನಟನೆಯ ‘ದಿ ವಿಲನ್’ ಸಿನಿಮಾದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಚಿತ್ರಕ್ಕೆ ಜೋಗಿ ಪ್ರೇಮ್ ನಿರ್ದೇಶನ ಮಾಡಿದರು.