ನಾನು ರಾಜಕೀಯಕ್ಕೆ ಬಂದಿರುವುದೇ ಆಕಸ್ಮಿಕ: ಸುಮಲತಾ ಅಂಬರೀಶ್

Public TV
2 Min Read
sumalatha ambareesh

ಮಂಡ್ಯ: ನಾನು ರಾಜಕೀಯಕ್ಕೆ ಬಂದಿರುವುದೇ ಆಕಸ್ಮಿಕ. ನಾನು ಪೂರ್ಣ ಪ್ರಮಾಣದಲ್ಲಿ ಇಲ್ಲೇ ಇರಲು ಬರಲಿಲ್ಲ. ಚುನಾವಣೆಗೆ ನಿಲ್ಲುವ ಬಗೆಗೆ ಆಗಲಿ, ರಾಜಕೀಯ ಪಕ್ಷ ಸೇರುವ ಬಗೆಗೆ ಆಗಲಿ ಅಥವಾ ಸ್ವತಂತ್ರವಾಗಿ ಉಳಿಯುವ ಬಗೆಗೆ ಆಗಲಿ ಇನ್ನೂ ನಿರ್ಧಾರವಾಗಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಹೇಳಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಬರಬೇಕು ಎಂಬ ಬೆಂಬಲಿಗರ ನಿರ್ಧಾರ ವಿಚಾರವಾಗಿ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ನಿಲ್ಲಬೇಕು ಎಂಬುದು ಅಷ್ಟು ಸುಲಭವಾದ ವಿಚಾರವಲ್ಲ. ಅದೊಂದು ದೊಡ್ಡ ನಿರ್ಧಾರವಾಗುತ್ತದೆ. ಚುನಾವಣೆಗೆ ಎಷ್ಟು ದಿನವಿದೆ ಎನ್ನುವುದು ಮುಖ್ಯವಲ್ಲ. ಆದರೆ ಅನುಕೂಲಕರ ವಾತಾವರಣ ಎಷ್ಟಿದೆ ಎಂಬುವುದು ಮುಖ್ಯ. ಹಾಗಾಗಿ ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂಬುವುದನ್ನು ಹೇಳಲು ಇದು ಸಮಯವಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

Sumalatha Ambareesh

ರಾಜಕಾರಣಕ್ಕೆ ಬರುವಂತೆ ಬಿಜೆಪಿ (BJP), ಕಾಂಗ್ರೆಸ್ (Congress) ಪಕ್ಷಗಳು ನನಗೆ ಆಹ್ವಾನವನ್ನು ನೀಡಿದೆ. ಆ ಪಕ್ಷದ ನಾಯಕರು ನನ್ನ ಜೊತೆ ಈ ಕುರಿತು ಮಾತನಾಡಿದ್ದಾರೆ. ದಶಪಥ ಹೆದ್ದಾರಿ ಉದ್ಘಾಟನೆ ವೇಳೆ ಸಂಸದೆಯಾಗಿ ಪ್ರಧಾನಮಂತ್ರಿಯವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು.

ಮಂಡ್ಯ (Mandya) ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್ ಅವರು ಆ ಸ್ಥಾನಕ್ಕೆ ಹೋಗಲು ಅಂಬರೀಶ್ ಕೊಡುಗೆ ಏನು ಎಂಬುವುದನ್ನು ನೆನಪು ಮಾಡಿಕೊಳ್ಳಬೇಕು. ಅವರು ಯಾವ ಉದ್ದೇಶದಿಂದ ನನ್ನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬಾರದು ಎಂದು ಹೇಳಿದ್ದಾರೋ ಗೊತ್ತಿಲ್ಲ. ನಾನು ಕೆಲವು ವಿಚಾರದಲ್ಲಿ ಬಿಜೆಪಿಗೆ ಬೆಂಬಲವನ್ನು ನೀಡುತ್ತೇನೆ. ಅದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ ಎಂದರು.

sumalatha ambarish

 

 

ಪಕ್ಷ ಸೇರುವ ಬಗೆಗೆ ಆಗಲಿ, ಚುನಾವಣೆಗೆ (Election) ನಿಲ್ಲುವ ಬಗೆಗೆ ಆಗಲಿ ನಾನು ಮತ್ತೊಮ್ಮೆ ಜನಾಭಿಪ್ರಾಯವನ್ನು ಕೇಳುತ್ತೇನೆ. ಒಂದು ನಿರ್ಧಾರವನ್ನು ತೆಗೆದುಕೊಂಡಾಗ ಅದಕ್ಕೆ ವಿರೋಧ ಎನ್ನವುದು ಇದ್ದೇ ಇರುತ್ತದೆ. ಹಾಗಾಗಿ ಎಲ್ಲರ ಅಭಿಪ್ರಾಯವನ್ನು ಪಡೆಯಲು ಆಗುವುದಿಲ್ಲ. ಸಮಯ ಬಂದಾಗ ನನ್ನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಹೇಳಿಕೆಯನ್ನು ನೀಡಿದರು. ಇದನ್ನೂ ಓದಿ: ಎಎಪಿಗೆ ಗುಡ್‌ಬೈ; ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಬಿಜೆಪಿ ಸೇರ್ಪಡೆ

Share This Article
Leave a Comment

Leave a Reply

Your email address will not be published. Required fields are marked *