‘ನಮ್ಮನೆ ಯುವರಾಣಿ’ ಸೀರಿಯಲ್ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ಅಂಕಿತಾ ಅಮರ್ (Ankita Amar) ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ನಟಿಗೆ ಬಿಗ್ ಆಫರ್‌ವೊಂದು ಅರಸಿ ಬಂದಿದೆ. ರಿಯಲ್ ಸ್ಟಾರ್ ಉಪೇಂದ್ರಗೆ (Upendra) ಅಂಕಿತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ:ರಾಕೇಶ್ ಗುಣ ಮಗುವಿನಂತೆ – ಬಿಕ್ಕಿ ಬಿಕ್ಕಿ ಅತ್ತ ದಿವ್ಯಾಶ್ರೀ
ನಾಗಣ್ಣ ನಿರ್ದೇಶನದ, ಸೂರಪ್ಪ ಬಾಬು ನಿರ್ಮಾಣದ ‘ಭಾರ್ಗವ’ ಚಿತ್ರಕ್ಕೆ ನಾಯಕಿಯಾಗಿ ಅಂಕಿತಾ ಸೆಲೆಕ್ಟ್ ಆಗಿದ್ದಾರೆ. ಈ ಸಿನಿಮಾದಲ್ಲಿ ನಟಿಗೆ ಉತ್ತಮ ಪಾತ್ರವೇ ಸಿಕ್ಕಿದೆ. ಉಪೇಂದ್ರ ಅವರು ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಅಂಕಿತಾ ನಟನೆ ನೋಡಿ ‘ಭಾರ್ಗವ’ ಚಿತ್ರಕ್ಕೆ ಇವರೇ ಸೂಕ್ತ ಎಂದು ಹೇಳಿದ್ದರು. ಹೀಗಾಗಿ ಅಂಕಿತಾಗೆ ಉಪೇಂದ್ರ ಜೊತೆ ನಟಿಸುವ ಒಂದೊಳ್ಳೆಯ ಅವಕಾಶ ಸಿಕ್ಕಿದೆ. ಇದನ್ನೂ ಓದಿ:ಕುಟುಂಬ ಸಮೇತ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪೇಂದ್ರ
View this post on Instagram
ಶೈನ್ ಶೆಟ್ಟಿ ‘ಜಸ್ಟ್ ಮ್ಯಾರೀಡ್’, ಪೃಥ್ವಿ ಅಂಬರ್ ಜೊತೆ ‘ಅಬ ಜಬ ದಬ’ ಸಿನಿಮಾಗಳು ನಟಿಯ ಕೈಯಲ್ಲಿವೆ. ಕಳೆದ ವರ್ಷ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ವಿಹಾನ್‌ಗೆ ನಾಯಕಿಯಾಗಿ ನಟಿಸಿದ್ದರು ಅಂಕಿತಾ.