ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅನು ಪ್ರಭಾಕರ್ ಸ್ವಾತಂತ್ರ್ಯ ದಿನಾಚರಣೆಯಂದೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ರಘು ಮುಖರ್ಜಿ ಅವರು ಈ ಕುರಿತು ಫೋಟೋವನ್ನ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಮಗು ಹಾಗೂ ಅನು ಪ್ರಭಾಕರ್ ಇಬ್ಬರು ಆರೋಗ್ಯವಾಗಿದ್ದು, ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
https://www.instagram.com/p/BmfhstbgzDy/?hl=en&taken-by=raghumukherjee
ರಘು ಅವರ ಪೋಸ್ಟ್ ಹಲವು ಅಭಿಮಾನಿಗಳು ಪ್ರತಿಕ್ರಿಯೆ ನೀಡಿ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೆಲ ಅಭಿಮಾನಿಗಳು ಮಗುವಿನ ಫೋಟೋ ನಿರೀಕ್ಷೆಯಲ್ಲಿದ್ದೇವೆ ಎಂದು ಬೇಡಿಕೆ ಇಟ್ಟಿದ್ದಾರೆ.
ಈ ಹಿಂದೆ ಪತ್ನಿ ಅನು ಪ್ರಭಾಕರ್ ಗರ್ಭಿಣಿ ಆಗಿದ್ದ ವಿಚಾರವನ್ನು ಹಂಚಿಕೊಂಡಿದ್ದ ರಘು ಮುಖರ್ಜಿ, ನೀವು ಖಂಡಿತ ಟೆರಿಫಿಕ್ ಅಮ್ಮ ಆಗಲಿದ್ದೀರಿ ಎಂದು ಟ್ವೀಟ್ ಮಾಡಿದ್ದರು. ಅಂದಹಾಗೇ ನಟಿ ಅನು ಪ್ರಭಾಕರ್ ಹಾಗೂ ನಟ ರಘು ಮುಖರ್ಜಿ ಅವರು 2016 ಏಪ್ರಿಲ್ 25 ರಂದು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಇಬ್ಬರಿಗೂ ಇದು ಎರಡನೇ ಮದುವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv