CinemaLatestMain PostSouth cinema

ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ

`ಬಾಹುಬಲಿ’ (Bahubali) ನಟಿ ಅನುಷ್ಕಾ ಶೆಟ್ಟಿ (Anushka Shetty) ಚಿತ್ರರಂಗದಲ್ಲಿ ಮತ್ತೆ ಆಕ್ಟೀವ್‌ ಆಗಿದ್ದಾರೆ. ಸದ್ದಿಲ್ಲದೇ ಸೈಲೆಂಟ್‌ ಆಗಿ ಸಿನಿಮಾ ಮಾಡ್ತಿದ್ದಾರೆ. ಇದೀಗ ಹೊಸ ಸಿನಿಮಾಗೆ ಸ್ವೀಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಪವರ್‌ಫುಲ್ ಪಾತ್ರದ ಮೂಲಕ ಮೋಡಿ ಮಾಡಲು ರೆಡಿಯಾಗಿದ್ದಾರೆ.

ಕನ್ನಡತಿ ಅನುಷ್ಕಾ ಶೆಟ್ಟಿ ಮತ್ತೆ ಸಿನಿಮಾಗಳಲ್ಲಿ ಆಕ್ಟೀವ್ ಆಗ್ತಿದ್ದಾರೆ. ಸದ್ಯ ನವೀನ್ ಪೋಲಿಶೆಟ್ಟಿ (Naveen Polishetty) ಅಭಿನಯದ ಚಿತ್ರದಲ್ಲಿ ಅನುಷ್ಕಾ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ತಮಿಳಿನ(Tamil Films) ಹೊಸ ಚಿತ್ರಕ್ಕೆ ನಟಿ ಓಕೆ ಅಂದಿದ್ದಾರೆ.

ಎ.ಎಲ್ ವಿಜಯ್ ನಿರ್ದೇಶನದ ಸಿನಿಮಾದಲ್ಲಿ ಅನುಷ್ಕಾ ನಟಿಸೋದು ಫೈನಲ್ ಆಗಿದೆ. ಈ ಕುರಿತು ಡೈರೆಕ್ಟರ್ ವಿಜಯ್ ಅವರೇ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ. ತಮಿಳು ಮತ್ತು ತೆಲುಗುಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ.ಇದನ್ನೂ ಓದಿ: ಗುರೂಜಿ ಮಾಡಿದ ಆ ಒಂದು ತಪ್ಪಿನಿಂದ, ಮನೆ ಮಂದಿಗೆ ಬಿಗ್ ಬಾಸ್ ಗುನ್ನ

ಈ ಹಿಂದೆ ಎ.ಎಲ್ ವಿಜಯ್ ಮತ್ತು ಅನುಷ್ಕಾ ಕಾಂಬಿನೇಷನ್‌ನ `ದೈವ ತಿರುಮಗಳ್’ ಮತ್ತು `ತಾಂಡವಂ’ ಚಿತ್ರ ಮೂಡಿ ಬಂದಿತ್ತು. ಇದೀಗ ಮೂರನೇ ಬಾರಿಗೆ ಒಟ್ಟಿಗೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ. ಅರುಂಧತಿ, ಭಾಗಮತಿಯಂತಹ ಪವರ್‌ಫುಲ್ ರೋಲ್ ಮೂಲಕ ಅನುಷ್ಕಾ ಮತ್ತೆ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ತಮ್ಮ ಫ್ಯಾನ್ಸ್‌ಗೆ ಸ್ವೀಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button