ಹಾರ್ಟ್ ಬೀಟ್ ಹೆಚ್ಚಿಸಿದ ಚುಟುಚುಟು ಬ್ಯೂಟಿ ಆಶಿಕಾ ರಂಗನಾಥ್‌

Public TV
1 Min Read
ashika

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಆಶಿಕಾ ರಂಗನಾಥ್‌ ಹಾಟ್ ಫೋಟೋ ಶೂಟ್ ಮಾಡಿಸಿದ್ದಾರೆ. ಪಡ್ಡೆ ಹುಡುಗರ ಹಾರ್ಟ್ ಬೀಟ್ ಹೆಚ್ಚಿಸುವ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ashika rangnath 1

2016 ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಇವರು ಕ್ರೇಜಿ ಬಾಯ್ ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಈಗ ಸ್ಯಾಂಡಲ್‍ವುಡ್‍ನ ಟಾಪ್ ನಟಿಯರು ಲಿಸ್ಟ್‌ನಲ್ಲಿ ಆಶಿಕಾ ರಂಗನಾಥ್‌ ಒಬ್ಬರಾಗಿದ್ದಾರೆ. ಇದನ್ನೂ ಓದಿ:  ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ, ಮನವಿ ಮೊದಲಿನಂತೆಯೇ ಇರಲಿದೆ: ಅನುಷ್ಕಾ ಶರ್ಮಾ

ashika 3

ಕನ್ನಡ ಚಿತ್ರರಂಗದಲ್ಲಿ ಮಿಲ್ಕ್ ಬ್ಯೂಟಿ ಎಂದೇ ಖ್ಯಾತಿಯಾಗಿರುವ ಆಶಿಕಾ ರಂಗನಾಥ್‌ ಚಂದನವನದ ಪ್ರತಿಭಾನಿತ್ವ ನಟಿ. ಸದ್ಯ ಈ ಕ್ಯೂಟಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ

ashika 2

1996, ಆಗಸ್ಟ್ 5 ರಂದು ಹಾಸನದಲ್ಲಿ ಜನಿಸಿದರು. ತಂದೆ ರಂಗನಾಥ್ ಸಿವಿಲ್ ಕಾಂಟ್ರಾಕ್ಟರ್ ಮತ್ತು ತಾಯಿ ಸುಧಾ ಗೃಹಿಣಿ. ಇವರ ಹಿರಿಯ ಸಹೋದರಿ ಅನುಷಾ ಕಿರುತೆರೆಯ ಪ್ರಮುಖ ನಟಿ. ಇದನ್ನೂ ಓದಿ: ಹಸೆಮಣೆ ಏರಲು ಸಿದ್ಧರಾದ ವಜ್ರಕಾಯ ಬೆಡಗಿ ಶುಭ್ರಾ ಅಯ್ಯಪ್ಪ

ashika 1

`ಕ್ರೇಜಿ ಬಾಯ್’ ಚಿತ್ರದ ಮೂಲಕ ಚಂದನವನಕ್ಕೆ ಪರಿಚಯವಾದರು. 2018 ರಲ್ಲಿ ಆಶಿಕಾ ಮತ್ತು ಶರಣ್ ಕಾಂಬಿನೇಶನ್‍ಲ್ಲಿ ಬಂದ ರ‍್ಯಾಂಬೊ 2 ಚಿತ್ರ ಅಭೂತಪೂರ್ವ ಪ್ರದರ್ಶನ ಕಂಡಿತ್ತು. ಇಲ್ಲಿಂದ ಇವರ ಲಕ್ ಬದಲಾಗಿ ಹೋಗಿತ್ತು. ಇವರು ನಟಿಸುವ ಸಿನಿಮಾಗಳು ಹಿಟ್ ಎನ್ನುವ ಹಾಗೆ ಆಗಿದೆ. ಸುದೀಪ್, ಶ್ರೀ ಮುರುಳಿ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಜೊತೆಗೆ ಇವರು ಪರದೆ ಮೇಲೆ ಕಾಣಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *