ತಿರುವನಂತಪುರಂ: 2017ರಲ್ಲಿ ನಟಿ ಮೇಲಿನ ಲೈಂಗಿಕ ಕಿರುಕುಳ ಸಂಬಂಧಿಸಿದ ಕೇಸ್ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಗಳ ಮೇಲೆ ದಾಳಿಗೆ ಸಂಚು ಆರೋಪ ಎದುರಿಸುತ್ತಿರುವ ಖ್ಯಾತ ಮಲೆಯಾಳಂ ನಟ ದಿಲೀಪ್‌ರನ್ನು ಜನವರಿ 27ರ ವರೆಗೆ ಬಂಧಿಸದಂತೆ ಕೇರಳ ಹೈಕೋರ್ಟ್ ಸೂಚನೆ ನೀಡಿದೆ.
Advertisement
ದಿಲೀಪ್ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ಕ್ಲಿಪ್‍ವೊಂದನ್ನು ಟಿವಿ ವಾಹಿನಿಯೊಂದು ಬಿಡುಗಡೆ ಮಾಡಿತ್ತು. ಹೀಗಾಗಿ ಕೆಲದಿನಗಳ ಹಿಂದೆ ದಿಲೀಪ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಆಡಿಯೋ ವೈರಲ್ ಆಗುತ್ತಿದ್ದಂತೆ, ಅಪರಾಧ ವಿಭಾಗದ ಕೇರಳ ಪೊಲೀಸ್ ತಂಡವು ದಿಲೀಪ್ ಮತ್ತು ಆತನ ಸಹೋದರನ ಮನೆ, ಕಚೇರಿಗಳ ಮೇಲೆ ದಾಳಿ ಕೂಡ ನಡೆಸಿತ್ತು. ಬಳಿಕ ಕೇಸ್ ದಾಖಲಿಸಿಕೊಂಡು ದಿಲೀಪ್ ಬಂಧಿಸಲು ತಯಾರಿ ನಡೆಸಲಾಗಿತ್ತು. ಇದನ್ನೂ ಓದಿ: ನಟಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ – ನಟ ದಿಲೀಪ್ ಮನೆ ಮೇಲೆ ಕೇರಳ ಪೊಲೀಸರ ದಾಳಿ
Advertisement
Advertisement
ಪ್ರಕರಣಕ್ಕೆ ಸಂಬಂಧಿಸದಂತೆ ದಿಲೀಪ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ಈ ಕೇಸ್ ವಿಚಾರಣೆ ನಡೆಸಿ ಜನವರಿ 23, 24, 25ರ ಒಳಗಾಗಿ ತನಿಖಾ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ತಿಳಿಸಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ಜನವರಿ 27ಕ್ಕೆ ಮೂಂದೂಡಿದ್ದು, ಅಲ್ಲಿಯ ವರೆಗೆ ದಿಲೀಪ್ ಅವರನ್ನು ಬಂಧಿಸದಂತೆ ಆದೇಶಿಸಿದೆ. ಇದನ್ನೂ ಓದಿ: ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡಿದ್ದ ಟೆಕ್ಕಿ ಅರೆಸ್ಟ್
Advertisement
ಕಳೆದ ವರ್ಷ ನ.25 ರಂದು ನಿರ್ದೇಶಕ ಬಾಲಚಂದ್ರ ಕುಮಾರ್, ದಿಲೀಪ್ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಕೇರಳ ಸಿಎಂಗೆ ದೂರು ಸಲ್ಲಿಸಿದ್ದರು. ಬಳಿಕ ದಿಲೀಪ್ ಅವರ ಬಂಧನವಾಗಿತ್ತು. ಎರಡು ತಿಂಗಳ ಬಳಿಕ ಜಾಮೀನಿನ ಮೇಲೆ ದಿಲೀಪ್ ಬಿಡುಗಡೆಯಾಗಿದ್ದರು. ಬಳಿಕ ಕೇಸ್‍ಗೆ ಸಂಬಂಧಿಸಿದಂತೆ ಇದೀಗ ಮತ್ತೆ ಹೊಸ ವಿಚಾರ ಬಹಿರಂಗಪಡಿಸಿದ ಹಿನ್ನೆಲೆ ಮತ್ತೆ ತನಿಖೆ ಚುರುಕುಗೊಂಡಿದೆ.