ಬೆಂಗಳೂರು: ಚಂದನವನದ ಹಿರಿಯ ನಟಿ, ರಂಗಭೂಮಿ, ಕಿರುತೆರೆಗಳಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್ ಅವರ ನಿಧನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಸಂತಾಪ ಸೂಚಿಸಿದ್ದಾರೆ.
Advertisement
1970ರಲ್ಲಿ ಮೊಟ್ಟ ಮೊದಲ ಬಾರಿಗೆ ನಾಗಾಭರಣ ಅವರು ನಿರ್ದೇಶಿಸುತ್ತಿದ್ದ ಬಕ ನಾಟಕದಲ್ಲಿ ಅಭಿನಯಿಸುವಂತೆ ಅವರನ್ನು ಕೇಳಲಾಗಿತ್ತು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಭಾರ್ಗವಿ ಒಂದು ತಿಂಗಳ ಕಾಲ ನಾಟಕದ ತಾಲೀಮಿಗೆ ಬರುತ್ತಿದ್ದರು. ಆ ಸಮಯದಲ್ಲಿ ಅವರು ಹೆಸರಾಂತ ನಟಿಯಾಗಿ ಗುರುತಿಸಿಕೊಂಡಿದ್ದರು. ಬಹಳ ದೊಡ್ಡ ಹೆಸರಿದ್ದ ನಟಿಯಾದರೂ ಭಾರ್ಗವಿ ಅವರು ಸಮಯಕ್ಕೆ ಸರಿಯಾಗಿ ನಾಟಕದ ತಾಲೀಮಿಗೆ ಆಗಮಿಸುತ್ತಿದ್ದರು. ಅವರಲ್ಲಿದ್ದ ಶ್ರದ್ಧೆ, ಸಮಯ ಬದ್ಧತೆ, ಶಿಸ್ತು ಇತರರಿಗೆ ಮಾದರಿಯಾಗಿತ್ತು ಎಂದು ಟಿ.ಎಸ್.ನಾಗಾಭರಣ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಇನ್ನಿಲ್ಲ
Advertisement
Advertisement
ಮೆಕಪ್ ನಾಣಿ ಅವರ ನನ್ನ ಗುರುಗಳಾಗಿದ್ದರು. ಭಾರ್ಗವಿ ನಾರಾಯಣ್ ನನ್ನ ಗುರು ಮಾತೆಯಾಗಿದ್ದರು. ಸಿನಿಮಾ ಮತ್ತು ರಂಗಭೂಮಿಯಲ್ಲಿ ಅವರು ನನಗೆ ಬೆನ್ನುಲುಬಾಗಿದ್ದರು. ನನ್ನ ಕಾಯಕದಲ್ಲಿ ಅವರು ಸದಾ ಭರವಸೆ ತುಂಬುವ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದ ಅಪಾರ ನೊವು ಉಂಟಾಗಿದೆ ಎಂದು ಕ.ಅ.ಪ್ರಾ. ಅಧ್ಯಕ್ಷರು ತಿಳಿಸಿದ್ದಾರೆ.
Advertisement
ಭಾರ್ಗವಿ ಅವರಿಗೆ ಯಾವುದೇ ಪಾತ್ರ ಕೊಟ್ಟರೂ ಅದನ್ನು ಅನಾಯಾಸವಾಗಿ ಮಾಡುತ್ತಿದ್ದರು. ಇವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ, ಅತ್ಯುತ್ತಮ ಪೋಷಕ ನಟಿ ,ರಾಜ್ಯನಾಟಕ ಅಕಾಡೆಮಿ ಪ್ರಶಸ್ತಿ,ಮಂಗಳೂರು ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಲಭಿಸಿವೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆನೆಂದು ಟಿ.ಎಸ್.ನಾಗಾಭರಣ ಅವರು ತಿಳಿಸಿದ್ದಾರೆ.
ಆರೋಗ್ಯ ಸಚಿವ ಹಿರಿಯ ನಟಿ, ರಂಗಭೂಮಿ ಕಲಾವಿದೆ ಶ್ರೀಮತಿ ಭಾರ್ಗವಿ ನಾರಾಯಣ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಹಾಗೂ ಕಿರುತರೆಗೆ ತುಂಬಲಾರದ ನಷ್ಟವಾಗಿದೆ. ತಮ್ಮ ಸಹಜ ಅಭಿನಯದಿಂದ ಕನ್ನಡಿಗರ ಪಾಲಿನ ಪ್ರೀತಿಯ ಅಜ್ಜಿಯಾಗಿದ್ದ ಶ್ರೀಮತಿ ಭಾರ್ಗವಿ ನಾರಾಯಣ್ ಅವರು ಟಿ.ಎನ್.ಸೀತಾರಾಮ್ ಅವರ ಮುಕ್ತ ಧಾರಾವಾಹಿಯಲ್ಲಿ ಅಜ್ಜಿ ಪಾತ್ರದ ಮೂಲಕ ಮನೆ ಮಾತಾಗಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ, ಅವರ ಮಕ್ಕಳಾದ ಶ್ರೀ ಪ್ರಕಾಶ್ ಬೆಳವಾಡಿ, ಶ್ರೀಮತಿ ಸುಧಾ ಬೆಳವಾಡಿ ಸೇರಿದಂತೆ ಅವರ ಎಲ್ಲ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಹಾಗೂ ಸ್ನೇಹಿತರಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ವಿಜಯ್ ಕಿರಗಂದೂರ್ ಟ್ವೀಟ್ ಮಾಡಿ, ಉತ್ತಮ ಬರವಣಿಗೆ, ಅದ್ಭುತ ನಟನೆ ಮೂಲಕ, ಪ್ರತೀ ಪಾತ್ರಕ್ಕೆ ಜೀವ ತುಂಬುತ್ತಿದ್ದ ನಾಡಿನ ಹಿರಿಯ ಕಲಾವಿದರು ಭಾರ್ಗವಿ ನಾರಾಯಣ್ ಅವರ ಅಗಲಿಕೆಯ ಸುದ್ದಿ ತಿಳಿದು ನೋವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕಲಾವಿದ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥನೆ. ಓಂ ಶಾಂತಿ.