ಉದಯ ಟಿವಿಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿರುವ ʻಮೈನಾʼ (Maina) ಧಾರಾವಾಹಿಯಲ್ಲಿ (Serial) 90ರ ದಶಕದ ಬಹುಬೇಡಿಕೆಯ ನಾಯಕಿ, ಚಿತ್ರತಾರೆ ಭವ್ಯಾ (Bhavya) ನಟಿಸುತ್ತಿದ್ದಾರೆ. ಪ್ರೇಮಪರ್ವ, ಪ್ರಳಯಾಂತಕ, ನೀ ಬರೆದ ಕಾದಂಬರಿ, ಕೃಷ್ಣ ನೀ ಬೇಗನೆ ಬಾರೋ, ಕರುಣಾಮಯಿ, ಹೃದಯಗೀತೆ, ಮತ್ತೆ ಹಾಡಿತು ಕೋಗಿಲೆ, ಹೃದಯ ಹಾಡಿತು, ಸಾಂಗ್ಲಿಯಾನ ಇತ್ಯಾದಿ ಸೂಪರ್ ಹಿಟ್ ಸಿನಿಮಾಗಳಲ್ಲಿ ವಿಷ್ಣುವರ್ಧನ್, ಶಂಕರನಾಗ್, ಅಂಬರೀಶ್, ರವಿಚಂದ್ರನ್ ಮತ್ತಿತರ ದಿಗ್ಗಜ ಕಲಾವಿದರ ಜೊತೆ ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ಭವ್ಯಾ, ಟಿವಿ ಧಾರಾವಾಹಿಯಲ್ಲಿ ನಟಿಸುತ್ತಿರುವುದು ಇದೇ ಮೊದಲು.
Advertisement
ಭವ್ಯಾ ಅವರದು ʻಮೈನಾʼ ಧಾರಾವಾಹಿಯಲ್ಲಿ ಮಹಿಳಾ ಹಾಸ್ಟೆಲ್ ಮುಖ್ಯಸ್ಥೆ ಅರುಂಧತಿಯ ಪಾತ್ರ. ಕಟ್ಟುನಿಟ್ಟಾದರೂ ತಾಯಿ ಹೃದಯಿ. ಊರು ಬಿಟ್ಟು ಪರವೂರಿಗೆ ಬಂದಿರುವ ಹೆಣ್ಣುಮಕ್ಕಳೇ ಹೆಚ್ಚಿರುವ ಜಾಗದಲ್ಲಿ ಎಲ್ಲರನ್ನೂ ನಿಯಂತ್ರಿಸುತ್ತ ಎಲ್ಲರ ಸಮಸ್ಯೆಗಳಿಗೂ ಸ್ಪಂದಿಸುತ್ತ ಎಲ್ಲರ ಭಾವನೆಗಳಿಗೂ ಬೆಲೆ ಕೊಡುವ ಅಪರೂಪದ ಪಾತ್ರ. ಮೈನಾ ಜೀವನದಲ್ಲಿ ಹಠಾತ್ತನೆ ಬರುವ ಅನಿರೀಕ್ಷಿತ ತಿರುವು ಕಂಗೆಡಿಸಿದಾಗ ಅವಳಿಗೆ ಆಸರೆಯಾಗಿ ನಿಲ್ಲುತ್ತಾಳೆ ಅರುಂಧತಿ. ಹಾಗೆಯೇ ಇವರ ಮಹಿಳಾ ಹಾಸ್ಟೆಲ್‌ನಲ್ಲಿರುವ ಇತರ ನಾಲ್ಕು ಹೆಣ್ಣುಮಕ್ಕಳೂ ʻಮೈನಾʼ ಧಾರಾವಾಹಿಯ ಮಹತ್ವದ ಪಾತ್ರಗಳಾಗಿ ಬರುತ್ತಾರೆ.
Advertisement
Advertisement
ಮಹಿಳಾ ಹಾಸ್ಟೆಲ್ ಈ ಧಾರಾವಾಹಿಯಲ್ಲಿ ಒಂದು ಬಹುಮುಖ್ಯ ಅಂಗವೇ ಆಗಿದೆ. ʻಮೈನಾʼ ಧಾರಾವಾಹಿ ಪ್ರತಿದಿನ(ಸೋಮವಾರದಿಂದ ಭಾನುವಾರ) ರಾತ್ರಿ 9 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.