ಸ್ಯಾಂಡಲ್‌ವುಡ್ ಬ್ಯೂಟಿ ಚೈತ್ರಾ ಆಚಾರ್ (Chaithra Achar) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸಂಚಲನ ಮೂಡಿಸುತ್ತಲೇ ಇರುತ್ತಾರೆ. ಇದೀಗ ‘ಟೋಬಿ’ (Toby) ಹುಡುಗಿಯ ನ್ಯೂ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ.
ಕಪ್ಪು ಬಣ್ಣದ ಶಾರ್ಟ್ ಟಾಪ್ ಮತ್ತು ನೀಲಿ ಬಣ್ಣದ ಜೀನ್ಸ್ ತೊಟ್ಟು ನಟಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ನಯಾ ಲುಕ್ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ಚೈತ್ರಾ ಕ್ಯಾಮೆರಾ ಕಣ್ಣಿಗೆ ಪೋಸ್ ಮಾಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ‘ಟೋಬಿ’ ಸುಂದರಿಯ ಮೈಮಾಟಕ್ಕೆ ಪಡ್ಡೆಹುಡುಗರು ಬಗೆ ಬಗೆಯ ಕಾಮೆಂಟ್ ಹಾಕುತ್ತಿದ್ದಾರೆ.
ಇತ್ತೀಚೆಗೆ ಫೋಟೋಶೂಟ್‌ವೊಂದಕ್ಕೆ ನೆಗೆಟಿವ್ ಕಾಮೆಂಟ್ ಮತ್ತು ಟ್ರೋಲ್ (Troll) ಆಗಿತ್ತು. ಅದಕ್ಕೆ ಖಡಕ್ ಆಗಿ ಚೈತ್ರಾ ರಿಯಾಕ್ಟ್ ಮಾಡಿದ್ದರು. ದೇವರ ಹಾಡು ಹಾಡ್ತಾರೆ ಆದರೆ ಹಾಕುವ ಬಟ್ಟೆ ಈ ತರಹ ಎಂದು ಕಾಮೆಂಟ್ ಮಾಡುವವರಿಗೆ ನಟಿ ತಕ್ಕ ಉತ್ತರ ನೀಡಿದ್ದರು.
ಬೇರೇ ಮನೆ ಹೆಣ್ಣು ಮಗಳ ಮರ್ಯಾದೆ ತೆಗೆಯಬೇಕು ಎಂದು ಪಣ ತೊಟ್ಟವರಿಗೆ ಏನು ಹೇಳೋದು ಅಂತಾ ನಟಿ ಗರಂ ಆಗಿದ್ದರು. ನನಗೆ ಯಾವ ವಿಚಾರ ತಪ್ಪು ಅಥವಾ ಸರಿ. ಎಲ್ಲಿ ಯಾವ ತರಹ ಇರಬೇಕು ಅನ್ನೋದು ಚೆನ್ನಾಗಿ ಗೊತ್ತು. ನಾನು ಬೆಳೆದು ಹಾದಿಯಲ್ಲಿ ನನ್ನ ಪೋಷಕರು ಮತ್ತು ಶಿಕ್ಷಕರು ನನಗೆ ಕಲಿಸಿ ಕೊಟ್ಟಿದ್ದಾರೆ ಎಂದು ನಟಿ ಪ್ರತಿಯುತ್ತರ ನೀಡಿದ್ದರು. ಇದನ್ನೂ ಓದಿ:ಇದುವರೆಗೂ ನಮ್ರತಾ ಕುಟುಂಬವನ್ನು ಕಾಂಟ್ಯಾಕ್ಟ್ ಮಾಡದ ಸ್ನೇಹಿತ್- ಅಸಲಿ ಕಾರಣವೇನು?
ನನ್ನ ಸಿನಿಮಾಗಳ ಮೂಲಕ ಜನಕ್ಕೆ ರೀಚ್ ಆಗುತ್ತೀದ್ದಿನಿ. ನಾನು ಏನೋ ಕೆಲಸ ಮಾಡಿದಾಗ ಒಳ್ಳೆತನದಿಂದ ಹಾರೈಸೋದು ತುಂಬಾ ಕಮ್ಮಿ. ಅವರನ್ನ ಕೆಳಗೆ ಇಳಿಸುವಂತಹ ಮನಸ್ಥಿತಿ ಇರೋರು. ಯಾವುದೇ ರೀತಿಯ ಪೋಸ್ಟ್ ಇದ್ದರು ಕೆಟ್ಟ ಕಾಮೆಂಟ್‌ಗಳನ್ನೇ ಮಾಡುತ್ತಾರೆ ಅಂತಹವರಿಗೆ ಏನು ಹೇಳೋದು ಎಂದು ಅಸಮಾಧಾನ ಹೊರಹಾಕಿದ್ದರು.
2023ರಲ್ಲಿ ‘ಟೋಬಿ’ (Toby) ಮತ್ತು ‘ಸಪ್ತಸಾಗರದಾಚೆ ಎಲ್ಲೋ’ ಪಾರ್ಟ್ 2 ಈ ಚಿತ್ರಗಳು ಚೈತ್ರಾ ಆಚಾರ್ (Chaithra Achar) ಕೆರಿಯರ್‌ಗೆ ಬಿಗ್ ಬ್ರೇಕ್ ನೀಡಿದೆ. ಇದೀಗ ದೀಕ್ಷಿತ್ ಶೆಟ್ಟಿ ಜೊತೆಗಿನ ‘ಬ್ಲಿಂಕ್’ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳು ಚೈತ್ರಾ ಕೈಯಲ್ಲಿದೆ.