ಜೀವನದ ಹೊಸದೊಂದು ಹೆಜ್ಜೆ, ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ: ನಟಿ ಚಂದನಾ

Public TV
1 Min Read
chandana

ಬೆಂಗಳೂರು: ಕಿರುತೆರೆ ನಟಿ ಚಂದನಾ ಅನಂತಕೃಷ್ಣ ಮೂರ್ತಿ ಜೀವನದ ಹೊಸದೊಂದು ಹೆಜ್ಜೆ, ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುವ ಮೂಲಕವಾಗಿ ಅಭಿಮಾನಿಗಳ ಜೊತೆಗೆ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ.

chandana 1

ಭರತನಾಟ್ಯ ಪ್ರ್ಯಾಕ್ಟೀಸ್ ಮಾಡಿದ ನಂತರದ ಫೋಟೋವನ್ನು ಚಂದನಾ ಹಂಚಿಕೊಂಡಿದ್ದಾರೆ. ಇಂದು ಜೀವನದ ಹೊಸದೊಂದು ಹೆಜ್ಜೆ ಬಗ್ಗೆ ನಿಮ್ಮೊಂದಿಗೆ ಹಂಚಿಕೊಳ್ಳುವ ಆಸೆ. ಭರತನಾಟ್ಯದಲ್ಲಿ ಮುಂದುವರೆಯಬೇಕು ಎಂಬುದು ಅಪ್ಪ, ಅಮ್ಮನ ಕನಸು, ನನ್ನ ಕನಸು ಕೂಡ. ಅದರಂತೆಯೇ ಇವತ್ತು ಎಂಪಿಎ ( Masters in Performing Arts) ಮೊದಲನೇ ಪ್ರ್ಯಾಕ್ಟಿಕಲ್ ಕ್ಲಾಸ್‍ನಲ್ಲಿ ಭಾಗವಹಿಸಿದ ಖುಷಿ ನನ್ನದು. ಎಂದಿನಂತೆಯೇ ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ತಂದೆಯಂತೆ ಮಧು ಬಂಗಾರಪ್ಪ ನಾಯಕರಾಗಿ ಬೆಳೆಯುತ್ತಾರೆ: ಸಿದ್ದರಾಮಯ್ಯ

ಚಂದನಾ ಅವರು ಬಿಗ್‍ಬಾಸ್‍ಗೆ ಎಂಟ್ರಿ ಪಡೆದ ನಂತರ ಜನರಿಗೆ ಸಾಕಷ್ಟು ಪರಿಚಯವಾದರು. ಹೀಗಾಗಿ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಇನ್‍ಸ್ಟಾಗ್ರಾಮ್‍ನಲ್ಲಿ ಅವರಿಗೆ ಲಕ್ಷಾಂತರ ಹಿಂಬಾಲಕರಿದ್ದಾರೆ. ಭರತನಾಟ್ಯ ಕೂಡ ಕಲಿತಿದ್ದಾರೆ. ಈಗ ಅದರಲ್ಲೇ ಮುಂದುವರಿಯಲು ಅವರು ನಿರ್ಧರಿಸಿದ್ದಾರೆ. ಇದು ಅವರ ಜೀವನದ ಮಹತ್ವದ ಹೆಜ್ಜೆ ಆಗಿರಲಿದೆ. ಈ ಬಗ್ಗೆ ಚಂದನಾ ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಿಮ್ಮಿಂಗ್‍ಪೂಲ್‍ನಲ್ಲಿ ಐರಾ, ಯಥರ್ವ್ ಮೋಜು ಮಸ್ತಿ

ಈಗ ಚಂದನಾ ತಂದೆ, ತಾಯಿ ಆಸೆ ಈಡೇರಿಸಲು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಬಿಗ್‍ಬಾಸ್ ಕಾರ್ಯಕ್ರಮ ಇವರಿಗೆ ಒಂದು ಕಿರುತೆರೆಹಲ್ಲಿ ಕಾಣಿಸಿಕೊಳ್ಳಲು ಅವಕಾಶಗಳು ಹೆಚ್ಚಾಗಿ ಸಿಕ್ಕಿವೆ.

Share This Article
Leave a Comment

Leave a Reply

Your email address will not be published. Required fields are marked *