Bengaluru CityCinemaCrimeDistrictsKarnatakaLatestLeading NewsMain Post

ನಟಿ ಚೇತನಾ ರಾಜ್ ಸಾವು ಪ್ರಕರಣ – ಆಸ್ಪತ್ರೆಗೆ ಬೀಗ, ವೈದ್ಯರಿಗೆ ನೋಟಿಸ್

ಬೆಂಗಳೂರು: ಕಿರುತೆರೆ ನಟಿ ಚೇತನಾ ರಾಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫ್ಯಾಟ್ ಸರ್ಜರಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗೆ ಬೀಗ ಜಡಿಯಲಾಗಿದ್ದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.

ಸಾವಿನ ಘಟನೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಆರೋಗ್ಯ ಇಲಾಖೆಯು ಡಾ.ಶೆಟ್ಟಿಗೆ ನೋಟಿಸ್ ಕೊಟ್ಟು ಆಸ್ಪತ್ರೆಯನ್ನ ಬಂದ್ ಮಾಡಿಸಲಾಗಿದೆ. ದೂರಿನ ಅನ್ವಯ ಸಾವಿನ ರಾಹಸ್ಯ ಭೇದಿಸಲು ಮುಂದಾಗಿದ್ದ ಸುಬ್ರಹ್ಮಣ್ಯ ನಗರ ಪೊಲೀಸರು, ಆಸ್ಪತ್ರೆಯ ಸಾಹೇಬ್ ಗೌಡ ಶೆಟ್ಟಿ ಸೇರಿದಂತೆ ನಾಲ್ವರ ವಿರುದ್ಧ ನೋಟಿಸ್ ಜಾರಿಗೊಳಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಚೇತನಾ ರಾಜ್ ಸಾವು: ಬಾಡಿ ಶೇಮಿಂಗ್‌ ವಿರುದ್ಧ ದನಿಯೆತ್ತಿದ ಅಶ್ವಿತಿ ಶೆಟ್ಟಿ

ಏನಿದು ಪ್ರಕರಣ?: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಈಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ವಾಸವಿರುವ ನಟಿಯ ಪೋಷಕರು, ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ನಾಳೆ ಬೆಂಗಳೂರಿಗೆ ಸನ್ನಿ ಲಿಯೋನ್ : ಮಂಡ್ಯಗೆ ಹೋಗಿ ರಕ್ತದಾನ ಮಾಡ್ತಾರಾ ಶೇಷಮ್ಮ?

ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ವೈದ್ಯರಿಗೆ ನೋಟಿಸ್ ನೀಡಿದ್ದಾರೆ.

Leave a Reply

Your email address will not be published.

Back to top button