‘ಬಿಗ್ ಬಾಸ್’ (Bigg Boss Kannada 7) ಬೆಡಗಿ ದೀಪಿಕಾ ದಾಸ್ (Deepika Das) ಸೀಕ್ರೆಟ್ ಆಗಿ ಮದುವೆಯಾಗುವ ಮೂಲಕ ಪಡ್ಡೆಹುಡುಗರಿಗೆ ಶಾಕ್ ಕೊಟ್ಟಿದ್ದರು. ಇದೀಗ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಮತ್ತು ಬೀಗರೂಟ ಕಾರ್ಯಕ್ರಮ ಜರುಗಿದೆ. ಈ ವೇಳೆ, ಪತಿ ದೀಪಕ್‌ರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ? ಲವ್ ಸ್ಟೋರಿ ಹೇಗೆ ಶುರುವಾಯ್ತು ಎಂದು ನಟಿ ಸುದ್ದಿಗೋಷ್ಠಿಯಲ್ಲಿ ರಿವೀಲ್ ಮಾಡಿದ್ದಾರೆ.
Advertisement
ದೀಪಿಕಾ ದಾಸ್‌ಗೆ ಗೋವಾದಲ್ಲೇ ಮದುವೆಯಾಗುವ ಕನಸು ಇತ್ತಂತೆ. ಹೀಗಾಗಿ ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ನಟಿ ದೀಪಿಕಾ ದಾಸ್ ಉದ್ಯಮಿ ದೀಪಕ್ ಎಂಬುವವರ ಜೊತೆ ಮಾರ್ಚ್ 1ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದನ್ನೂ ಓದಿ:ಅದ್ಧೂರಿಯಾಗಿ ನಡೆಯಿತು ದೀಪಿಕಾ ದಾಸ್ ಆರತಕ್ಷತೆ- ಶುಭಹಾರೈಸಿದ ಸೆಲೆಬ್ರಿಟಿಗಳು
Advertisement
Advertisement
ದೀಪಕ್ ಅವರ ಮೇಲೆ ನಿಮಗೆ ಲವ್ ಆಗಿದ್ದು ಹೇಗೆ ಎಂಬ ಪ್ರಶ್ನೆಗೆ ನಟಿ ದೀಪಿಕಾ ದಾಸ್ ಮನಬಿಚ್ಚಿ ಮಾತನಾಡಿದ್ದಾರೆ. ದೀಪಕ್ ಮತ್ತು ನಾನು ನಾಲ್ಕು ವರ್ಷದ ಸ್ನೇಹಿತರು. 4 ವರ್ಷಗಳ ಕಾರ್ಯಕ್ರಮವೊಂದರಲ್ಲಿ ಭೇಟಿಯಾದೆವು. ಕಳೆದ ಒಂದು ವರ್ಷದಿಂದ ರಿಲೇಷನ್‌ಶಿಪ್‌ನಲ್ಲಿ ಇದ್ವಿ. ಕುಟುಂಬಸ್ಥರು ಕೂಡ ನಮ್ಮ ಪ್ರೀತಿಗೆ ಓಕೆ ಎಂದರು.
Advertisement
ದೀಪಕ್ (Deepika Das) ಅವರಿಗೆ ಚಿತ್ರರಂಗಕ್ಕೂ ನಂಟಿಲ್ಲ. ಅವರು ಉದ್ಯಮಿ. ಮುಂದಿನ ದಿನಗಳಲ್ಲಿ ಪ್ರೊಡಕ್ಷನ್ ಹೌಸ್ ಮಾಡುವ ಮೂಲಕ ಚಿತ್ರರಂಗಕ್ಕೆ ಕರೆತರುವ ಯೋಜನೆ ಇದೆ. ಅವರು ಜಾಸ್ತಿ ಮಾತಾಡೋದಿಲ್ಲ. ನಾನೇ ಕಮ್ಮಿ ಮಾತಾಡುತ್ತೇನೆ ಅಂದುಕೊಂಡಿದ್ದೆ, ಆದರೆ ನನಗಿಂತ ಕಮ್ಮಿ ಮಾತಾಡುವ ಹುಡುಗ ನನಗೆ ಸಿಕ್ಕಿದ್ದಾರೆ. ನಾನು ಮದುವೆಯಾಗುವ ಹುಡುಗ ಹೀಗೆ ಇರಬೇಕು, ಹಾಗೇ ಇರಬೇಕು ಅಂತಾ ಅಂದುಕೊಂಡಿರಲಿಲ್ಲ. ಆದರೆ ನಾನು ಪ್ರೀತಿ ಅಂತಾ ಹುಡುಕಿಕೊಂಡು ಹೋಗಿಲ್ಲ. ನನ್ನ ಮದುವೆಯಾಗುವ ಹುಡುಗ ಮನಸ್ಸು ಚೆನ್ನಾಗಿರಬೇಕು, ನನ್ನ ಚೆನ್ನಾಗಿ ನೋಡಿಕೊಳ್ಳುವವನಾಗಿರಬೇಕು, ನನಗೆ ಟೈಮ್ ಕೊಡುವವನಾಗಿರಬೇಕು ಜೊತೆಗೆ ದೇಶ ಸುತ್ತುವವನಾಗಿರಬೇಕು ಅಂತಾ ಈ ಹಿಂದೆ ಹೇಳಿದ್ದೆ. ಅದೇ ರೀತಿ ನಾನು ಅಂದುಕೊಂಡ ಹಾಗೇ ನನಗೆ ನನ್ನ ಸಂಗಾತಿ ಸಿಕ್ಕಿದ್ದಾರೆ ಅಂತಾ ಹೇಳಿಕೊಂಡಿದ್ದಾರೆ.
ಬಳಿಕ ದೀಪಿಕಾ ದಾಸ್ ಪತಿ ದೀಪಕ್ ಮಾತನಾಡಿ, ನಾನು ದುಬೈ ಮೂಲದವನು ಅಲ್ಲ. ಇದೆ ಬೆಂಗಳೂರಿನ ಆರ್‌ಆರ್ ನಗರದವನು. ರಿಯಲ್ ಎಸ್ಟೇಟ್ ಜೊತೆ ದುಬೈನಲ್ಲಿ ಒಂದು ಐಟಿ ಕಂಪನಿ ಇದೆ. ದೀಪಿಕಾ ನನಗೆ ನಾಲ್ಕು ವರ್ಷಗಳಿಂದ ಗೊತ್ತು. ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ಇಷ್ಟು ದಿನ ಹೇಗೆಲ್ಲಾ ದೀಪಿಕಾಗೆ ಬೆಂಬಲಿಸಿದ್ರೋ ಮುಂದಿನ ದಿನಗಳಲ್ಲಿ ಕೂಡ ಅವಳಿಗೆ ಸಪೋರ್ಟ್ ಮಾಡಿ ಎಂದು ದೀಪಕ್ ಮನವಿ ಮಾಡಿದ್ದಾರೆ.
ಮಾರ್ಚ್ 10ರಂದು ಮಧ್ಯಾಹ್ನ 12.30ಕ್ಕೆ ಆರತಕ್ಷತೆ ಕಾರ್ಯಕ್ರಮ ಜರುಗಿದ್ದು, ಬಿಗ್ ಬಾಸ್ ಖ್ಯಾತಿ ದಿವ್ಯಾ ಉರುಡುಗ, ಪ್ರಶಾಂತ್ ಸಂಬರಗಿ, ನೀತು ವನಜಾಕ್ಷಿ, ಅನುಪಮಾ ಗೌಡ, ಚಂದನಾ ಅನಂತಕೃಷ್ಣ, ಪ್ರಿಯಾಂಕಾ, ಪನ್ನಗ ಭರಣ, ಕಿಶನ್, ಸಿಂಗರ್ ವಾಸುಕಿ ವೈಭವ್ ಸೇರಿದಂತೆ ಅನೇಕರು ಮದುವೆ ಆರತಕ್ಷತೆಯಲ್ಲಿ ಭಾಗಿಯಾಗಿ ವಿಶ್ ಮಾಡಿದ್ದಾರೆ.
ಅದಷ್ಟೇ ಅಲ್ಲ, ಸ್ನೇಹಿತೆ ದೀಪಿಕಾ ದಾಸ್ ‘ಇನ್ನೂನು ಬೇಕಾಗಿದೆ ಒಲವು’ ಎಂಬ ಸಾಂಗ್ ಹಾಡಿ ನವ ಜೋಡಿಗೆ ವಿಶೇಷವಾಗಿ ಶುಭಕೋರಿದ್ದಾರೆ ವಾಸುಕಿ ವೈಭವ್. ವಾಸುಕಿ-ದೀಪಿಕಾ ಸ್ನೇಹ ಇದೀಗ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.
ಮಾರ್ಚ್ 1ರಂದು ದೀಪಿಕಾ ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದ್ದರು. ಜೊತೆಗೆ ಹುಡುಗನ ಬಗ್ಗೆ ಯಾವುದೇ ಮಾಹಿತಿಯನ್ನೂ ಅವರು ಹಂಚಿಕೊಂಡಿರಲಿಲ್ಲ. ಮೊನ್ನೆಯಷ್ಟೇ ತನ್ನ ಕರಿಮಣಿ ಮಾಲೀಕನನ್ನು ನಟಿ ಪರಿಚಯಿಸಿದ್ದರು. ಪತಿಯ ಹೆಸರು ದೀಪಕ್ ಎಂದು ರಿವೀಲ್ ಮಾಡಿ ತಮ್ಮ ಮದುವೆಯ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದರು.
ಪದ್ಧತಿಯ ಬದ್ಧವಾಗಿ, ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ ಎಂದು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ದಿಢೀರ್ ಅಂತ ಆಗಿದ ಮದುವೆ ಅಲ್ಲ. ಈ ಮದುವೆಗೆ ಹಲವು ದಿನಗಳಿಂದ ಪ್ಲ್ಯಾನ್ ಮಾಡಲಾಗಿತ್ತು. ಸರ್ಪ್ರೈಸ್ ಕೂಡ ಸ್ವೀಟ್ ಆಗಿದೆ. ನನಗೆ ನನ್ನ ಬಾಳ ಸಂಗಾತಿ ಸಿಕ್ಕಿದ್ದು, ಪಕ್ಕಾ ದೇಸಿ. ದಯವಿಟ್ಟು ನಮ್ಮ ಗೌಪ್ಯತೆಯನ್ನು ಗೌರವಿಸಿ ಎಂದು ದೀಪಿಕಾ ದಾಸ್ ಮನವಿ ಮಾಡಿದ್ದರು.
ನಾಗಿಣಿ ಸೀರಿಯಲ್ ಬಿಗ್ ಬಾಸ್ ಸೀಸನ್ 7ರ ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಅವರು ಗೋವಾದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಆಗಿದ್ದಾರೆ. ಗೋವಾದ ಕಡಲ ತೀರದಲ್ಲಿ ಬೆಂಗಳೂರಿನ ಉದ್ಯಮಿ ದೀಪಕ್‌ರನ್ನು ನಟಿ ಮದುವೆ ಆಗಿದ್ದಾರೆ. ಮಾರ್ಚ್ 1ರಂದು ನಡೆದ ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿಯಾಗಿದ್ದಾರೆ.