ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣ್‌ವೀರ್ ಸಿಂಗ್ (Ranveer Singh) ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಕಣ್ಣು ಹೊಡೆಯುತ್ತಾ ನಟಿ ರೀಲ್ಸ್ ಮಾಡಿರುವ ವಿಡಿಯೋವನ್ನು ಅಭಿಮಾನಿಗಳ ಗಮನ ಸೆಳೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್‌ನಲ್ಲಿದೆ.
ಒಂದು ಸೆಕೆಂಡಿನ ರೀಲ್ಸ್ ವಿಡಿಯೋವನ್ನು ನಟಿ ಶೇರ್ ಮಾಡಿದ್ದಾರೆ. ದೀಪಿಕಾರ ಕಣ್ಣೋಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಕಾರ್ಯಕ್ರಮಕ್ಕೆ ರೆಡಿಯಾಗುತ್ತಿರುವ ವೇಳೆ, ಈ ವಿಡಿಯೋವನ್ನು ಮಾಡಲಾಗಿದೆ. ವಿಡಿಯೋ ಶೇರ್ ಮಾಡಿದ ಕೆಲವೇ ಗಂಟೆಗಳಲ್ಲಿ ಭರ್ಜರಿ ವಿವ್ಸ್ ಪಡೆದುಕೊಂಡಿದೆ. ಇದನ್ನೂ ಓದಿ:ಇನ್ಸ್ಟಾಗ್ರಾಂನಲ್ಲಿ ನರೇಂದ್ರ ಮೋದಿಯನ್ನು ಹಿಂದಿಕ್ಕಿದ ಶ್ರದ್ಧಾ ಕಪೂರ್
View this post on Instagram
ಅಂದಹಾಗೆ, ದೀಪಿಕಾ ಪಡುಕೋಣೆ ದಂಪತಿ ಚೊಚ್ಚಲ ಮಗುವನ್ನು ಸೆಪ್ಟೆಂಬರ್‌ನಲ್ಲಿ ಬರಮಾಡಿಕೊಳ್ಳಲಿದ್ದಾರೆ. ಮಗುವಿನ ಆಗಮನಕ್ಕಾಗಿ ನಟಿಯ ಪರಿವಾರ ಎದುರು ನೋಡುತ್ತಿದೆ.
ಇನ್ನೂ ‘ಕಲ್ಕಿ 2898 ಎಡಿ’ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ಪ್ರಭಾಸ್ ಜೊತೆ ನಟಿಸಿದ್ದ ದೀಪಿಕಾ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಮುಂಬರುವ ‘ಸಿಂಗಂ ಅಗೇನ್’ ಸಿನಿಮಾದಲ್ಲಿ ಲೇಡಿ ಪೊಲೀಸ್ ಆಫೀಸರ್ ಆಗಿ ಮಿಂಚಿದ್ದಾರೆ.