ಬೆಂಗಳೂರು: ಫ್ರೆಂಚ್ ಬಿರಿಯಾನಿ ಸುಂದರಿ ದಿಶಾ ಮದನ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇವರು ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
ಮಾರ್ಚ್ 2022ಕ್ಕೆ ಕಾಯುತ್ತಿರುವೆ. ಮೂರರಿಂದ ನಾಲ್ವರಾಗುತ್ತಿದ್ದೇವೆ. 2022ರಲ್ಲಿ ನನ್ನ ಮೊದಲ ಮಗ ಅಣ್ಣನಾಗುತ್ತಾನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ತಾವು 2ನೇ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ಈ ಹಿಂದೆ ಹಂಚಿಕೊಂಡಿದ್ದರು. ಇದೀಗ ನಟಿ, ಸಖತ್ ಬೋಲ್ಡ್ ಲುಕ್‍ನಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಇವರ ಫೋಟೋಗಳಿಗೆ ನೆಟ್ಟಿಗರು ಕಾಮೆಂಟ್ ಮಾಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ನಟಿ ದಿಶಾ ಮದನ್ ಹಾಗೂ ಪತಿ ಶಶಾಂಕ್ ವಾಸುಕಿ ಗೋಪಾಲ್ 2017ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. 2019ರಲ್ಲಿ ಪುತ್ರ ವಿಹಾನ್ ಜನಿಸಿದ್ದಾನೆ. 2020ರಲ್ಲಿ ಹೊಸ ಮನೆ ಖರೀದಿಸಿ ಗೃಹಪ್ರವೇಶ ಮಾಡಿದ್ದಾರೆ. ಇದೀಗ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
View this post on Instagram
ಸಾಮಾಜಿಕ ಜಾಲತಾಣದಲ್ಲಿ ಡಬ್ ಸ್ಮಾಷ್ ಮೂಲಕ ಸದಾ ಕ್ರಿಯಾಶೀಲರಾಗಿರುವ ದಿಶಾ ಮದನ್, ಕಿರುತೆರೆ ಹಾಗೂ ಬೆಳ್ಳಿ ತೆರೆಯಲ್ಲಿ ಆಗಾಗ ಕಾಣಿಸಿಕೊಳ್ಳುವ ಮೂಲಕ ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ. ಈ ಹಿಂದೆ ಡ್ಯಾನ್ಸಿಂಗ್ ರಿಯಾಲಿಟಿ ಶೋನಲ್ಲಿ ಕೂಡ ಹೆಜ್ಜೆ ಹಾಕಿದ್ದರು. ಅಲ್ಲದೆ ಆಗಾಗ ತನ್ನ ಮಗನೊಂದಿಗೆ ಫೋಟೋಶೂಟ್ ನಡೆಸುವ ಮೂಲಕ ಹೆಚ್ಚು ಗಮನಸೆಳೆದಿದ್ದರು.