ಬೆಂಗಳೂರು: ಕಿರುತೆರೆ ನಟಿ ದಿಶಾ ಮದನ್ ತಮ್ಮ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದು, ತಾಯಿಯಾದ ಖುಷಿಯಲ್ಲಿ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ.
ನಟಿ ದಿಶಾ ಅವರು ಶನಿವಾರ ಅಂದರೆ ಜುಲೈ 27 ರಂದು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೋಮವಾರ ತಮ್ಮ ಮಗುವಿನ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಫೋಟೋಗೆ ‘ಬುಬ್ಬಾ ವಿ’ ಎಂಬ ಶೀರ್ಷಿಕೆ ಕೊಟ್ಟಿದ್ದು, ತಮ್ಮ ಪತಿ ಶಶಾಂಕ್‍ವಾಸುಕಿ ಗೋಪಾಲ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಸ್ನೇಹಿತರು ಮತ್ತು ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಅವರು ಶುಭಾಶಯವನ್ನು ತಿಳಿಸುತ್ತಿದ್ದಾರೆ.
https://www.instagram.com/p/B0gCKsQn_eB/
ದಿಶಾ ಮದನ್ ತಾವು ತಾಯಿ ಆಗುತ್ತಿರುವ ವಿಷಯವನ್ನು ಇನ್‍ಸ್ಟಾಗ್ರಾಂ ಮೂಲಕ ತಮ್ಮ ಅಭಿಮಾನಿಗಳಲ್ಲಿ ಹಂಚಿಕೊಂಡಿದ್ದರು. ಅಷ್ಟೇ ಅಲ್ಲದೇ ಇತ್ತೀಚೆಗೆ ಅವರು ಹಾಟ್ ಫೋಟೋಶೂಟ್ ಕೂಡ ಮಾಡಿಸಿಕೊಂಡಿದ್ದರು.
ನಟಿ ದಿಶಾ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ `ಕುಲವಧು’ ಧಾರಾವಾಹಿಯಲ್ಲಿ `ವಚನ’ ಪಾತ್ರ ನಿರ್ವಹಿಸುತ್ತಿದ್ದರು. ನಂತರ ಅವರು ಡ್ಯಾನ್ಸ್ ರಿಯಾಲಿಟಿ ಶೋನಲ್ಲೂ ಭಾಗವಹಿಸಿದ್ದರು.