Connect with us

Cinema

50 ಯೂಟ್ಯೂಬ್ ಚಾನೆಲ್‍ನಲ್ಲಿ ನಟಿಯ ಅಶ್ಲೀಲ ವಿಡಿಯೋ ಅಪ್ಲೋಡ್

Published

on

ಹೈದರಾಬಾದ್: ತೆಲುಗು ನಟಿ ಪೂನಂ ಕೌರ್ ಅವರ ಅಶ್ಲೀಲ ವಿಡಿಯೋಗಳನ್ನು ಕಿಡಿಗೇಡಿಗಳು 50 ಯೂಟ್ಯೂಬ್ ಚಾನೆಲ್‍ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಬಗ್ಗೆ ಪೂನಂ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ನಕಲಿ ವಿಡಿಯೋಗಳನ್ನು ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಈ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ ಎಂದು ಬುಧವಾರ ಪೂನಂ ಕೌರ್ ಸಿಟಿ ಪೊಲೀಸ್ ಕಮಿಷನರ್ ಬಳಿಕ ದೂರು ದಾಖಲಿಸಿದ್ದರು.

ಹಣ ಪಡೆಯುವ ಸಲುವಾಗಿ ಕಿಡಿಗೇಡಿಗಳು 50 ಯೂಟ್ಯೂಬ್ ಚಾನೆಲ್‍ನಲ್ಲಿ ನನ್ನ ನಕಲಿ ವಿಡಿಯೋ ಹಾಗೂ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಪೂನಂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೂನಂ ದೂರಿನ ಆಧಾರದಲ್ಲಿ ಸೈಬರ್ ಕ್ರೈಂ ಪೊಲೀಸರು ಕಿಡಿಗೇಡಿಗಳ ವಿರುದ್ಧ ಐಟಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೂನಂ ‘ಶೌರ್ಯಂ’, ‘ವಿನಾಯಾಕುಡು’ ಹಾಗೂ ‘ಗಣೇಶ್ ಜಸ್ಟ್ ಗಣೇಶ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೆ ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರ ‘ಬಂಧು-ಬಳಗ’ ಚಿತ್ರ ಸೇರಿದಂತೆ ತಮಿಳು, ಮಲೆಯಾಳಂ ಚಿತ್ರದಲ್ಲೂ ಅಭಿನಯಿಸಿದ್ದಾರೆ.