ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ (Haripriya) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಪ್ರೆಗ್ನೆನ್ಸಿ ಫೋಟೋಶೂಟ್ (Baby Bump) ಮಾಡಿಸಿ ನಟಿ ಮಿಂಚಿದ್ದಾರೆ. ಸುಂದರ ಬೇಬಿ ಬಂಪ್ ಫೋಟೋಶೂಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕುಟುಂಬ ಜೊತೆಗಿನ ಫೋಟೋ ಹಂಚಿಕೊಂಡ ಧ್ರುವ- ಕ್ಯೂಟ್ ಫ್ಯಾಮಿಲಿ ಎಂದ ಫ್ಯಾನ್ಸ್
ನೀಲಿ ಬಣ್ಣದ ಉಡುಗೆ ಧರಿಸಿ ನಟಿ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಬೇಬಿ ಬಂಪ್ ಲುಕ್ ಶೇರ್ ಮಾಡಿದ್ದಾರೆ. ಅದಷ್ಟೇ ಅಲ್ಲ, ಪತಿ ವಸಿಷ್ಠ (Vasishta Simha) ಜೊತೆ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ನಟಿಯ ವಿವಿಧ ಭಂಗಿಯ ಪೋಸ್ ಈಗ ನೆಟ್ಟಿಗರ ಗಮನ ಸೆಳೆದಿದೆ.
View this post on Instagram
ಕಳೆದ ವರ್ಷ ಜ.26ರಂದು ಮೈಸೂರಿನಲ್ಲಿ ವಸಿಷ್ಠ ಸಿಂಹ ಜೊತೆ ನಟಿ ಹಸೆಮಣೆ ಏರಿದರು. ಹಲವು ವರ್ಷಗಳು ಪ್ರೀತಿಸಿ ಗುರುಹಿರಿಯರ ಒಪ್ಪಿಗೆ ಪಡೆದು ಮದುವೆಯಾದರು. ಇದೀಗ ಚೊಚ್ಚಲ ಮಗುವನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದಾರೆ.
ಅಂದಹಾಗೆ, ವಸಿಷ್ಠ ಸಿಂಹ ಕನ್ನಡದ ಜೊತೆ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಲವು ಪಾತ್ರಗಳ ಮೂಲಕ ಗಮನ ಸೆಳೆಯಲು ಸಜ್ಜಾಗಿದ್ದಾರೆ. ಹರಿಪ್ರಿಯಾ ಪ್ರಸ್ತುತ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.