ಬೆಂಗಳೂರು: ಸ್ಯಾಂಡಲ್ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಇಂದು ನಟಿ ಹರಿಪ್ರಿಯಾ ಅವರು ಶುಭಕೋರಿದ್ದಾರೆ.
ತುಂಬು ಗರ್ಭಿಣಿ ಅಮೂಲ್ಯ ಜೊತೆಗಿನ ಫೋಟೋದೊಂದಿಗೆ ಇನ್ ಸ್ಟಾಗೆ ಅಪ್ಲೋಡ್ ಮಾಡಿರುವ ಹರಿಪ್ರಿಯಾ, ತಾಯಿಯಾಗುತ್ತಿರುವ ಅಮೂಲ್ಯಗೆ ಶುಭಾಶಯಗಳು. ಪುಟ್ಟ ಕಂದಮ್ಮನ ಆಗಮನಕ್ಕಾಗಿ ಕಾಯುತ್ತಿದ್ದು, ಮಗುವನ್ನು ನೋಡಲು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
View this post on Instagram
ಕೆಲ ದಿನಗಳ ಹಿಂದೆಯಷ್ಟೇ ಅಮೂಲ್ಯ ಹಾಗೂ ಪತಿ ಜಗದೀಶ್ ವಿಜಯನಗರದ ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರಿಂದ ಭಗವದ್ಗೀತೆ ಗ್ರಂಥವನ್ನು ಪಡೆದಿದ್ದು, ಮನಸ್ಸಿಗೆ ಸಂತೋಷ ನೀಡಿತು ಎಂದು ನಟಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ: ತುಂಬು ಗರ್ಭಿಣಿ ಅಮೂಲ್ಯಾ ಜೊತೆ ಗೋಲ್ಡನ್ ಸ್ಟಾರ್ ಪತ್ನಿ -ಫೋಟೋ ವೈರಲ್
2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆ ಬಳಿಕ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಜಾಸ್ತಿ ಗಮನ ನೀಡಿದ್ದರು. ಇದೀಗ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದು, ತಮ್ಮನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲು ಬರುತ್ತಿರುವ ಗೆಳೆಯರ ಜೊತೆ ಫೋಟೋ ತೆಗೆಸಿಕೊಂಡು ಅದನ್ನು ತಮ್ಮ ಸೋಶಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.