ಸ್ಯಾಂಡಲ್ ವುಡ್ (Sandalwood) ಜೋಡಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ಪೊನ್ನಣ್ಣ (Bhuvan Ponnanna) ಕೊನೆಗೂ ಹಸೆಮಣೆ ಏರುತ್ತಿದ್ದಾರೆ. ತುಂಬಾ ವರ್ಷಗಳಿಂದ ಈ ಜೋಡಿ ಪ್ರೀತಿ ಪ್ರೇಮದ ಗೀತೆಗಳನ್ನು ಹಾಡಿಕೊಂಡಿದ್ದರು. ಮದುವೆ (Marriage) ವಿಚಾರವಾಗಿ ಇಬ್ಬರೂ ತಪ್ಪಿಸಿಕೊಳ್ಳುತ್ತಿದ್ದರು. ಇದೀಗ ಮದುವೆ ಆಮಂತ್ರಣ ನೀಡುವ ಮೂಲಕ ಸತಿಪತಿಯಾಗುತ್ತಿದ್ದಾರೆ.
ಮೊನ್ನೆಯಷ್ಟೇ ಕೊಡಗಿನ (Kodagu) ಇಗ್ಗುತ್ತಪ್ಪ ದೇವಾಲಯದಲ್ಲಿ ಲಗ್ನಪತ್ರಿಕೆ ಕಾರ್ಯ ಸರಳವಾಗಿ ನಡೆದಿದೆ. ಎರಡೂ ಕುಟುಂಬದ ಸದಸ್ಯರು ಮತ್ತು ಆತ್ಮೀಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮದುವೆಯಲ್ಲಿ ಈ ಜೋಡಿಯ ಆತ್ಮೀಯರು, ಸಿನಿಮಾ ರಂಗದ ಗಣ್ಯರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್
ಮದುವೆ ಆಮಂತ್ರಣ ಪತ್ರಿಕೆ ಕೂಡ ಸಿದ್ಧವಾಗಿದ್ದು, ಕೊಡಗು ಭಾಷೆಯಲ್ಲೇ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ. ಕೊಡಗು ಸಂಪ್ರದಾಯದಂತೆಯೇ ಇಬ್ಬರೂ ಮದುವೆ ಆಗುತ್ತಿದ್ದು, ಮುಹೂರ್ತ ಕಾರ್ಯಗಳು ಬಹುತೇಕವಾಗಿ ಕೊಡಗಿನಲ್ಲೇ ನಡೆಯಲಿವೆ. ಭುವನ್ ಮತ್ತು ಹರ್ಷಿಕಾ ಇಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರೂ ಒಟ್ಟಿಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗಿದ್ದರು.
Web Stories