ಬೆಂಗಳೂರು: ಮೀಟೂ ಅಭಿಯಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ದೂರಿದ್ದ ನಟಿ ಹರ್ಷಿಕಾ ಪೂಣಚ್ಚ ಅವರಿಗೆ ಈಗ ಬೆದರಿಕೆ ಕರೆಗಳು ಬರಲು ಆರಂಭವಾಗಿದೆ.
ಮೀಟೂ ಬೆಳವಣಿಗೆಯಲ್ಲಿ ಹರ್ಷಿಕಾ ಪೂಣಚ್ಚ ಅವರು ಮೀಟೂ ಆರೋಪ ಮಾಡಿದವರಿಗೆ ಖಡಕ್ ಆಗಿ ಉತ್ತರ ಕೊಟ್ಟಿದ್ದರು. ಆದ್ದರಿಂದ ಅವರಿಗೆ ವಾಟ್ಸಪ್ ಮೂಲಕ ಕಳೆದ 2 ದಿನಗಳಿಂದ ನಿರಂತರ ಬೆದರಿಕೆ ಕರೆಗಳನ್ನು ಮಾಡುತ್ತಿದ್ದು, ಜೊತೆಗೆ ಮೆಸೇಜ್ ಕೂಡ ಮಾಡುತ್ತಿದ್ದಾರೆ. ಇದನ್ನೂ ಓದಿ:ಚಿತ್ರರಂಗವನ್ನೇ ಬಿಟ್ಟು ಹೋಗಲಿ – ನಟಿ ಹರ್ಷಿಕಾ ಪೂಣಚ್ಚ ಖಡಕ್ ಮಾತು
Advertisement
Advertisement
ಬಾಯಿ ಮುಚ್ಚಿಕೊಂಡು ಇರಿ ಎಂದು ವಾಟ್ಸಪ್ ಗೆ ಮೆಸೇಜ್ ಕಳುಹಿಸಿದ್ದಾರೆ. 555ನಿಂದ ಕೊನೆಗೊಳ್ಳುವ ಮೊಬೈಲ್ ನಂಬರ್ ನಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಹೇಳಿದ್ದಾರೆ. ಆದರೆ ಹರ್ಷಿಕಾ ಪೂಣಚ್ಚಗೆ ಬೆದರಿಕೆ ಹಾಕುತ್ತಿರುವ ಆ ಖ್ಯಾತನಾಮರು ಯಾರು ಎನ್ನುವ ಪ್ರಶ್ನೆ ಮೂಡಿದೆ.
Advertisement
ಹರ್ಷಿಕಾ ಪೂಣಚ್ಚ ಅವರು, ಕಳೆದ ಎರಡು ದಿನಗಳಿಂದ ಕೆಲವು ಹೆಸರಾಂತ ವ್ಯಕ್ತಿಗಳಿಂದ ನನಗೆ ಬೆದರಿಕೆ ಕರೆ ಹಾಗೂ ಮೆಸೆಜ್‍ಗಳು ಬರುತ್ತಿವೆ. ಕೆಲವರು ನನ್ನ ಬಾಯಿ ಮುಚ್ಚಿಸಲು ಹಣದ ಆಮಿಷವನ್ನು ಒಡ್ಡಿದರು. ಹೀಗೆ ಮುಂದುವರಿದಲ್ಲಿ ನಾನು ಪೊಲೀಸ್ ಕಂಪ್ಲೇಂಟ್ ಕೊಡಲು ಸಿದ್ಧಳಾಗಬೇಕಾಗುತ್ತದೆ. ಸತ್ಯವನ್ನು ಮುಚ್ಚುವ ಕೆಲಸ ಯಾರಿಂದಲೂ ಸಾಧ್ಯವಿಲ್ಲ. ಕೆಚ್ಚೆದೆಯ ಕನ್ನಡತಿಯಾದ ನಾನು ಸದಾ ಸತ್ಯದ ಪರ” ಎಂದು ಮೆಸೇಜ್ ಮಾಡಿದ್ದಾರೆ.
Advertisement
#metoo #bereal #mentoo PART 1 pic.twitter.com/c1mduBbsss
— SmilingQueen Harshika Poonacha (@actressharshika) October 26, 2018
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಹರ್ಷಿಕಾ ಪೂಣಚ್ಚ, ಚಿತ್ರರಂಗದಲ್ಲಿ ಹೆಸರು ಮಾಡಲು 15 ವರ್ಷ ಕಷ್ಟಪಡಬೇಕು. ಆದರೆ ಒಂದು ಕ್ಷಣದಲ್ಲಿ ಅವರ ಕಷ್ಟವನ್ನು ಹಾಳು ಮಾಡಬಾರದು. ಪ್ರಚಾರಕ್ಕಾಗಿ ಒಬ್ಬರ ಹೆಸರನ್ನ ಹಾಳು ಮಾಡಬಾರದು. ಒಂದೊಮ್ಮೆ ಅಂತಹ ಪರಿಸ್ಥಿತಿ ಎದುರಾದರೆ ಆ ಅವಕಾಶವನ್ನು ಬಿಟ್ಟು ಹೋಗುವುದೇ ಉತ್ತಮ ಎಂದು ತಿಳಿಸಿದ್ದರು.
ಕಷ್ಟದಲ್ಲಿ ಇರುವ ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಅಭಿಯಾನ ಮೀಟೂ. ಆದರೆ ಅದನ್ನು ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ನಿಜವಾಗಿ ತೊಂದರೆ ಅನುಭವಿಸಿದ ಹೆಣ್ಣು ಮಕ್ಕಳು ಅಭಿಯಾನದಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದಾರೆ. ನಾವು ಬೇಡ ಅಂದರೆ ಚಿತ್ರರಂಗದಲ್ಲಿ ಯಾರೂ ಬಲವಂತ ಮಾಡಲ್ಲ. ನಿಮಗೆ ತೊಂದರೆ ಆದರೆ ಚಿತ್ರರಂಗ ಬಿಟ್ಟು ಹೋಗಿ ಎಂದು ಹರ್ಷಿಕಾ ಪೂಣಚ್ಚ ಖಡಕ್ ಆಗಿ ಹೇಳಿಕೆ ನೀಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=iCz49tD85ZI