ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ತಾವು ತೆರೆಯ ಮೇಲೆ ಮಾತ್ರ ನಾಯಕಿಯಲ್ಲ. ತೆರೆಯ ಹಿಂದೆಯೂ ನಾಯಕಿ ಅಂತಾ ಕೊರೊನಾ ವೇಳೆಯಲ್ಲಿ ತಮ್ಮ ಸಾಮಾಜಿಕ ಕಾರ್ಯದ ಮೂಲಕ ತೋರಿಸಿ ಕೊಟ್ಟವರು. ಭುವನಂ ಸಂಸ್ಥೆಯ ಮೂಲಕ ನಟ ಭುವನ್‌ಗೆ ಹರ್ಷಿಕಾ ಸಾಥ್ ನೀಡಿದ್ದರು. ಈಗ ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಅನ್ನು ಹರ್ಷಿಕಾ ಪೂಣಚ್ಚ ಸ್ವೀಕರಿಸಿದ್ದಾರೆ.
View this post on Instagram
Advertisement
ಬೆಳ್ಳಿಪರದೆಯಲ್ಲಿ ಸ್ಟಾರ್ ಆಗಿ ಮಿಂಚುವ ಅದೆಷ್ಟು ಕಲಾವಿದರು ನಿಜ ಜೀವನದಲ್ಲೂ ಸ್ಟಾರ್ ಆಗಿ ಇನ್ನೊಬ್ಬರ ಕಷ್ಟಕ್ಕೆ ಸಾಥ್ ನೀಡುವುದು ತುಂಬಾ ಕಮ್ಮಿ. ಆದರೆ ರಿಯಲ್ ಲೈಫ್‌ನಲ್ಲೂ ತಾವು ಹೀರೋನೇ ಅಂತಾ ನಟ ಭುವನ್ ಮತ್ತು ಹರ್ಷಿಕಾ ಪೂಣಚ್ಚ ತೋರಿಸಿ ಕೊಟ್ಟಿದ್ದರು. ಭುವನಂ ಸಂಸ್ಥೆಯ ಮೂಲಕ ಅದೆಷ್ಟೋ ಸಂಕಷ್ಟದಲ್ಲಿರುವವರಿಗೆ ನೆರವಾಗಿ ಭುವನ್ ಜೊತೆ ಹರ್ಷಿಕಾ ಸಾಥ್ ನೀಡಿದ್ದರು. ಇದನ್ನೂ ಓದಿ:ಕಿರುತೆರೆಗೆ ಮರಳಿದ ಎವರ್‌ಗ್ರೀನ್ ನಟಿ ಸುಧಾರಾಣಿ
Advertisement
View this post on Instagram
Advertisement
ಇದೀಗ ಇವರ ಸಮಾಜಮುಖಿ ಕಾರ್ಯ ಗುರುತಿಸಿ ಭುವನಂ ಸಂಸ್ಥೆಯ ಪರವಾಗಿ ನಟಿ ಹರ್ಷಿಕಾ, ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಅನ್ನು ಸ್ವೀಕರಿಸಿದ್ದಾರೆ. ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ನಟಿ ಹರ್ಷಿಕಾ ಅವರಿಗೆ ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದ್ದರು. ಈ ಪ್ರಶಸ್ತಿಯಿಂದ ಭುವನಂ ಸಂಸ್ಥೆಯ ಮೂಲಕ ಮತ್ತಷ್ಟು ಸಮಾಜಮುಖಿ ಕೆಲಸ ಮಾಡಲು ನಟಿಗೆ ಪ್ರೇರಣೆ ಸಿಕ್ಕಂತಾಗಿದೆ. ಪ್ರಶಸ್ತಿಯ ಕುರಿತು ಹರ್ಷಿಕಾ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ನಟಿಗೆ ಶುಭಹಾರೈಸಿದ್ದಾರೆ.