ಮುಂಬೈ: ಹುಬ್ಬಳ್ಳಿ ಮೂಲದ ಬಹು ಭಾಷಾ ನಟಿ ಇಶಾ ಕೊಪ್ಪಿಕರ್ ಅಧಿಕೃತವಾಗಿ ಭಾನುವಾರ ಮುಂಬೈನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮುಂಬೈನಲ್ಲಿ ಇಂದು ನಡೆದ ಕಾರ್ಯಕ್ರದಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಪಕ್ಷ ಸೇರಿದ್ದಾರೆ. ಈಗಾಗಲೇ ಅವರನ್ನು ಮಹಿಳಾ ಟ್ರಾನ್ಸ್‍ಪೋರ್ಟ್ ವಿಂಗ್ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ.
Mumbai: Actor Isha Koppikar joins Bharatiya Janata Party (BJP) in the presence of Union Transport Minister Nitin Gadkari. #Maharashtra pic.twitter.com/XLETYOcppT
— ANI (@ANI) January 27, 2019
ಇಶಾ ಅವರು 1998ರಲ್ಲಿ ತಮಿಳು ಚಿತ್ರದ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟರು. ನಂತರ 2000ರಲ್ಲಿ ಫಿಜಾ ಚಿತ್ರದ ಮೂಲಕ ಬಾಲಿವುಡ್ ಪ್ರವೇಶ ಮಾಡಿದರು. ಕನ್ನಡ, ಹಿಂದಿ, ತೆಲುಗು, ಮರಾಠಿ ಹಾಗೂ ತಮಿಳು ಚಿತ್ರದಲ್ಲಿ ಇಶಾ ಕೊಪ್ಪಿಕರ್ ನಟಿಸಿದ್ದಾರೆ. ಕನ್ನಡದ ‘ಸೂರ್ಯವಂಶ’, ‘ಓ ನನ್ನ ನಲ್ಲೆ’ ಸೇರಿದಂತೆ ಅನೇಕ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.
ಈ ಮೂಲಕ ಲೋಕಸಭಾ ಚುನಾವಣೆಗೆ ಸ್ಟಾರ್ ಪ್ರಚಾರಕರನ್ನು ಬಿಜೆಪಿ ಸೆಳೆದುಕೊಂಡಿದ್ದು, ಅವರನ್ನು ಕೂಡಾ ಚುನಾವಣಾ ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎನ್ನುವ ಮಾತು ಈಗ ಕೇಳಿ ಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv