ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ತಾಯಿ ಕಿಮ್ (Kim) ಇಂದು (ಏ.6) ಪಾರ್ಶ್ವವಾಯುವಿಗೆ ತುತ್ತಾಗಿ ನಿಧನರಾಗಿದ್ದಾರೆ. ನಟಿಯ ತಾಯಿಯ ನಿಧನಕ್ಕೆ ಬಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ. ಇದನ್ನೂ ಓದಿ:ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ ‘ಕಿರಾತಕ’ ನಟಿಗೆ ಫ್ಯಾನ್ಸ್ ತರಾಟೆ
ಹಲವು ದಿನಗಳಿಂದ ಜಾಕ್ವೆಲಿನ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಮಾ.24ರಂದೇ ಕಿಮ್ ಫರ್ನಾಂಡಿಸ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ಐಸಿಯುಗೆ ದಾಖಲಿಸಲಾಗಿತ್ತು. ಆ ವೇಳೆ, ಬಾಲಿವುಡ್ ನಟ ಸಲ್ಮಾನ್ ಖಾನ್ ಸೇರಿದಂತೆ ನಟಿಯ ಆಪ್ತರು ಆಸ್ಪತ್ರೆಗೆ ಆಗಮಿಸಿ ಕಿಮ್ ಅವರ ಆರೋಗ್ಯವನ್ನು ವಿಚಾರಿಸಿದ್ದರು. ಇದನ್ನೂ ಓದಿ:ರಾಮ್ ಚರಣ್ ‘ಪೆದ್ದಿ’ ಚಿತ್ರದ ಗ್ಲಿಂಪ್ಸ್ ಔಟ್- ನಟನ ಮಾಸ್ ಅವತಾರಕ್ಕೆ ಫ್ಯಾನ್ಸ್ ಫಿದಾ
ಆದರೆ ಇಂದು ಪಾರ್ಶ್ವವಾಯುವಿಗೆ ತುತ್ತಾಗಿ ಜಾಕ್ವೆಲಿನ್ ತಾಯಿ ಕಿಮ್ ವಿಧಿವಶರಾಗಿದ್ದಾರೆ.