ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ (Janhvi Kapoor) ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜ್ಯೂ.ಎನ್‌ಟಿಆರ್ ಜೊತೆಗಿನ ‘ದೇವರ’ (Devara) ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ನಟಿ ಮತ್ಸ್ಯ ಕನ್ಯೆಯಂತೆ ಫೋಟೋಶೂಟ್ ಮಾಡಿಸಿದ್ದಾರೆ.
ಸದ್ಯ ಪ್ಯಾರಿಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜಾನ್ವಿ ಮತ್ಸ್ಯ ಕನ್ಯೆಯಂತೆ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಯಲ್ಲಿ ನಟಿ ಪೋಸ್ ಕೊಟ್ಟಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಪೋಸ್ಟ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.
ಜಾನ್ವಿಗೆ ಫೋಟೋಶೂಟ್ ಎನು ಹೊಸದಲ್ಲ. ಒಂದಲ್ಲ ಒಂದು ಬೋಲ್ಡ್ ಫೋಟೋಶೂಟ್ ಮೂಲಕ ನಟಿ ಸದ್ದು ಮಾಡುತ್ತಲೇ ಇರುತ್ತಾರೆ. ಫೋಟೋಶೂಟ್‌ನಲ್ಲೂ ಹೊಸ ಲುಕ್ ಅನ್ನು ನಟಿ ಟ್ರೈ ಮಾಡುತ್ತಲೇ ಇರುತ್ತಾರೆ. ಈಗ ಮತ್ಸ್ಯ ಕನ್ಯೆಯ ನೋಟಕ್ಕೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ.
ಅಂದಹಾಗೆ, ಜ್ಯೂ.ಎನ್‌ಟಿಆರ್ ಜೊತೆ ‘ದೇವರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹಳ್ಳಿ ಹುಡುಗಿಯ ಪಾತ್ರದಲ್ಲಿ ಜಾನ್ವಿ ಜೀವ ತುಂಬಿದ್ದಾರೆ. ಇದನ್ನೂ ಓದಿ:ವರುಣ್ ಧವನ್ ಜೊತೆ ಶ್ರೀಲೀಲಾ ಡ್ಯುಯೆಟ್
ರಾಮ್ ಚರಣ್ (Ram Charan) ಮತ್ತು ಬುಚ್ಚಿಬಾಬು ಕಾಂಬಿನೇಷನ್ ಸಿನಿಮಾದಲ್ಲಿ ನಟಿಗೆ ಚಾನ್ಸ್ ಸಿಕ್ಕಿದೆ. ಇಲ್ಲಿಯೂ ಡಿಫರೆಂಟ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ.