ಬೆಂಗಳೂರು: ದಿವಂಗತ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಯ ಸಮಯದಲ್ಲಿ ನಟಿ ಜಯಪ್ರದಾ ಅವರು ಖಡಕ್ ಅಧಿಕಾರಿ ಡಿಸಿಪಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿತ್ತು. ಈ ವೇಳೆ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಆದ್ದರಿಂದ ಬೆಂಗಳೂರು ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದರು. ಆಗ ಕಂಠೀರವ ಸ್ಟುಡಿಯೋದ ಗೇಟ್ ಬಳಿ ಜಯಪ್ರದಾ ಅವರು ನಿಂತಿದ್ದರು. ನೂಕುನುಗ್ಗಲು ಉಂಟಾಗುತ್ತಿದ್ದಂತೆ ಅಣ್ಣಾಮಲೈ, ಕಾರಿನಲ್ಲಿ ಕುಳಿತುಕೊಳ್ಳುವಂತೆ ಜಯಪ್ರದಾ ಅವರಿಗೆ ಸೂಚಿಸಿದ್ದಾರೆ.
Advertisement
Advertisement
ಡಿಸಿಪಿ ಅಣ್ಣಾಮಲೈ ಅವರು ಹೇಳಿದ್ದ ಮಾತನ್ನು ತಪ್ಪಾಗಿ ತಿಳಿದುಕೊಂಡ ನಟಿ ಜಯಪ್ರದಾ, ಸ್ಥಳದಲ್ಲಿಯೇ ಅವರ ವಿರುದ್ಧ ಕೂಗಾಡಿದ್ದಾರೆ. ಅಣ್ಣಾಮಲೈ ಡಿಸಿಪಿ ಆದರೆ ನಾನು ಮಾಜಿ ಸಂಸದೆಯಾಗಿದ್ದಾನೆ. ಅದರಲ್ಲೂ ನಾನೊಬ್ಬ ಮಹಿಳೆ. ನಮಗೆ ಭದ್ರತೆ ಒದಗಿಸಬೇಕು ಅವರು. ಯಾವುದೇ ತೊಂದರೆಯಾಗದಂತೆ ಭದ್ರತೆ ನೀಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಅಣ್ಣಾಮಲೈ ವಿರುದ್ಧ ಜಯಪ್ರದಾ ಕಿಡಿಕಾರಿದ್ದಾರೆ.
Advertisement
ದಿವಂಗತ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ವಿಧಿವಶರಾಗಿದ್ದರು. ಅಂದಿನಿಂದಲೂ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು ಭದ್ರತೆ ನೀಡುವ ಮೂಲಕ ಶಾಂತಿಯನ್ನು ಕಾಪಾಡಿದ್ದಾರೆ. ಇದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ, ರೆಬೆಲ್ ಸ್ಟಾರ್ ಅಂಬರೀಶ್ ನಿಧನದಿಂದ ಹಿಡಿದು ಅಂತ್ಯಕ್ರಿಯೆಯವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದರು.
Advertisement
ಕಂಠೀರವ ಸ್ಟೇಡಿಯಂ ಬಳಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬೆಂಗಳೂರು ಹಾಗೂ ಮಂಡ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯ ಎಲ್ಲರೂ ಎರಡು ದಿನಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ಭದ್ರತೆ ಒದಗಿಸಿದ್ದಾರೆ. ಬಹಳ ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದು ಹೇಳಿ ಎಲ್ಲರಿಗೂ ಧನ್ಯವಾದ ತಿಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv