‘ವೀರ ಮದಕರಿ’ ಬಾಲನಟಿ ಈಗ ನಾಯಕಿ- ಮಹೇಶ್ ಬಾಬು, ರಕ್ಷಿತ್ ಸಿನಿಮಾದಲ್ಲಿ ಜೆರುಶಾ

Public TV
2 Min Read
jerusha christopher

ಹೇಶ್ ಬಾಬು (Mahesh Babu) ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಆಕಾಶ್, ಅರಸು, ಪರಮೇಶ ಪಾನ್ ವಾಲ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಅಪರೂಪ ಎಂಬ ಸಿನಿಮಾ ಮೂಲಕ ಯುವ ಪ್ರತಿಭೆಗಳನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದ ಅವರೀಗ ಸ್ಮೈಲ್ ಗುರು ರಕ್ಷಿತ್ ಅನ್ನು (Smile Guru Rakshith) ನಾಯಕನಾಗಿ ಕನ್ನಡ ಸಿನಿಮಾ ಪ್ರೇಮಿಗಳ ಎದುರು ತರುತ್ತಿದ್ದಾರೆ.

jerusha christopher 1ಮಹೇಶ್ ಬಾಬು, ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. ಮೆರವಣಿಗೆ ಸಿನಿಮಾ ಮೂಲಕ ಐಂದ್ರಿತಾ ರೇ, ಚಿರು (Chiru Film) ಸಿನಿಮಾ ಮೂಲಕ ಕೃತಿ ಕರಬಂಧ, ಅಜಿತ್ ಚಿತ್ರದ ಮೂಲಕ ನಿಕ್ಕಿ ಗಲ್ರಾನಿ, ಕ್ರೇಜಿ ಬಾಯ್ (Crazy Boy) ಮೂಲಕ ಆಶಿಕಾ ರಂಗನಾಥ್ ಹೀಗೆ ಹಲವಾರು ನಟಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಕಿಚ್ಚನ ಕುಟುಂಬದ ಜೊತೆ ಊಟ ಸವಿದ ವಿನಯ್ ಗೌಡ

jerusha christopher 2ಅಂದಹಾಗೆ, ಜೆರುಶಾ ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ ‘ವೀರ ಮದಕರಿ’ (Veera Madakari) ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ (Jerusha Christopher) ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.

jerusha

ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳಲು ಹೆಸರಾಗಿರುವ ಸ್ಮೈಲ್ ಗುರು ರಕ್ಷಿತ್‌ಗೆ ಜೋಡಿಯಾಗಿ ಜೆರುಶಾ ಮಿಂಚಲಿದ್ದಾರೆ. ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೊಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದು, ಅದರ ವಿವರಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು.

ಅಂದಹಾಗೆ, ಮಹೇಶ್ ಬಾಬು ಹೊಸ ಕಥೆಗೆ ಸದ್ಯ ಶೀರ್ಷಿಕೆ ಫೈನಲ್ ಆಗಿಲ್ಲ. ಈ ಚಿತ್ರಕ್ಕೆ ಚೇತನ್ ಮತ್ತು ಅನುರಾಗ್ ಬಂಡವಾಳ ಹೂಡಲಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಮತ್ತು ಸತ್ಯ ಛಾಯಾಗ್ರಾಹಣವಿರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಮೇ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

Share This Article