ಕನ್ನಡ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳ ಮೂಲಕ ರಂಜಿಸಿದ್ದ ಜ್ಯೋತಿ ರೈ (Jyothi Rai) ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಡ್ತೀನಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಅಬುಧಾಬಿ ಮಂದಿರಕ್ಕೆ ಭೇಟಿ ನೀಡಿದ ರಜನಿಕಾಂತ್
ನಟನೆಗಿಂತ ಹಾಟ್ ಫೋಟೋಶೂಟ್‌ಗಳ ಮೂಲಕ ಸುದ್ದಿಯಾಗುವ ನಟಿ ಇದೀಗ ಎಲ್ಲರೂ ಖುಷಿಪಡುವ ಸುದ್ದಿ ಕೊಡೋದಾಗಿ ಹೇಳಿದ್ದಾರೆ. ಜ್ಯೋತಿ ರೈ ಈ ಪೋಸ್ಟ್ ಹಂಚಿಕೊಳ್ತಿದ್ದಂತೆ ಮದುವೆ (Wedding) ಬಗ್ಗೆ ಗುಡ್ ನ್ಯೂಸ್ ಕೊಡ್ತೀರಾ? ಎಂದು ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಹಾಗಾದ್ರೆ ನಟಿ ಹೇಳುವ ವಿಷ್ಯ ಏನಿರಬಹುದು ಎಂದು ಫ್ಯಾನ್ಸ್ ತಲೆಕಡೆಸಿಕೊಂಡಿದ್ದಾರೆ.
ಅಂದಹಾಗೆ, ಇತ್ತೀಚೆಗೆ ಜ್ಯೋತಿ ರೈ ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಅಶ್ಲೀಲ ವಿಡಿಯೋ ಪ್ರಕರಣದ ವಿಚಾರವಾಗಿ ನಟಿ ನೊಂದಿದ್ದರು. ಈ ಕುರಿತು ಸೈಬರ್ ಕ್ರೈಂಗೆ ನಟಿ ದೂರು ನೀಡಿದ್ದರು. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದು, ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದರು.
ಕನ್ನಡದ ಅನುರಾಗ ಸಂಗಮ, ಜೋಗುಳ, ಗೆಜ್ಜೆಪೂಜೆ, ಲವಲವಿಕೆ, ಕನ್ಯಾದಾನ, ಪ್ರೇರಣಾ, ಕಿನ್ನರಿ, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಸೀರಿಯಲ್‌ಗಳಲ್ಲಿ ಜ್ಯೋತಿ ನಟಿಸಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.