ರಾಕಿಂಗ್ ಸ್ಟಾರ್ ಯಶ್ (Yash) ಅವರು ‘ಟಾಕ್ಸಿಕ್’ ಸಿನಿಮಾ ಕೆಲಸದ ನಡುವೆ ‘ರಾಮಾಯಣ’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇದೀಗ ಅವರ ‘ರಾಮಾಯಣ’ (Ramayana) ಸಿನಿಮಾ ಬಗ್ಗೆ ಇಂಟ್ರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಯಶ್ ಜೊತೆ ಖ್ಯಾತ ನಟಿ ಕಾಜಲ್ ಅಗರ್ವಾಲ್ ಕೂಡ ನಟಿಸುತ್ತಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಯಜಮಾನ’ ಸೀರಿಯಲ್ ಖ್ಯಾತಿಯ ಗಜೇಂದ್ರ
‘ರಾಮಾಯಣ’ದಲ್ಲಿ ರಾಮನಾಗಿ ರಣಬೀರ್ ಕಪೂರ್ (Ranbir Kapoor), ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ರಾಮನ ಮುಂದೆ ರಾವಣನಾಗಿ ಯಶ್ ಘರ್ಜಿಸಲಿದ್ದಾರೆ. ಸದ್ಯದ ಹಾಟ್ ಟಾಪಿಕ್ ಏನಪ್ಪಾ ಅಂದ್ರೆ, ರಾವಣ ಯಶ್‌ಗೆ ಮಡದಿಯಾಗಿ ಕಾಜಲ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಮಂಡೋದರಿ ಪಾತ್ರದಲ್ಲಿ ‘ಮಗಧೀರ’ ಬೆಡಗಿ ನಟಿಸಲಿದ್ದಾರೆ ಎಂದು ಹೇಳಲಾಗ್ತಿದೆ. ಇದನ್ನೂ ಓದಿ: 10 ಲಕ್ಷದ ಡೈಮಂಡ್ ರಿಂಗ್, 9 ಲಕ್ಷ ಮೌಲ್ಯದ ವಾಚ್- ‘ಭಜರಂಗಿ’ ನಟಿ ಬ್ಯಾಗ್ ಕದ್ದ ಆರೋಪಿ ಅರೆಸ್ಟ್
ಮೂಲಗಳ ಪ್ರಕಾರ, ಈಗಾಗಲೇ ಕಾಜಲ್ ಮಂಡೋದರಿ ಪಾತ್ರಕ್ಕೆ ಲುಕ್ ಟೆಸ್ಟ್ ಕೊಟ್ಟಿದ್ದು, ಚಿತ್ರೀಕರಣಕ್ಕೂ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡವೇ ಖಾತ್ರಿಪಡಿಸಬೇಕಿದೆ. ಅದೇನೇ ಇರಲಿ ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
‘ರಾಮಾಯಣ’ (Ramayana) ಸಿನಿಮಾವನ್ನು ಎರಡು ಭಾಗಗಳಲ್ಲಿ ತರೋದಾಗಿ ಈಗಾಗಲೇ ಚಿತ್ರತಂಡ ತಿಳಿಸಿದೆ. 2026ರಲ್ಲಿ ಸಿನಿಮಾ ರಿಲೀಸ್ ಆಗಲಿದೆ.